ಕಾರ್ಕಳ : ಮಂಗಳೂರಿನಿಂದ ಕಾರ್ಕಳ ಮೂಲಕ ದಾವಣಗೆರೆ ಸಾಗುತ್ತಿದ್ದ ಶ್ರೀ ದುರ್ಗಾಂಬಾ ಬಸ್ ಬುಧವಾರ ರಾತ್ರಿ ಪಲ್ಟಿಯಾಗಿ ಓರ್ವ ಮೃತಪಟ್ಟ ಘಟನೆ ಜೋಡುಕಟ್ಟೆ ಎಂಬಲ್ಲಿ ನಡೆದಿದೆ.
ಬಸ್‌ನಲ್ಲಿ ಒಟ್ಟು 9 ಮಂದಿ ಪ್ರಯಾಣಿಕರಿದ್ದು, ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಇಬ್ಬರು ಚಾಲಕರಿದ್ದು, ಓರ್ವ ಸ್ಥಳದಲ್ಲೇ ಮೃತಾಪಟ್ಟಿದ್ದರೆ, ಮತ್ತೋರ್ವ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗುತ್ತಿದೆ. ಅಪಘಾತದಿಂದಾಗಿ ಬಸ್ಸಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.
ರಸ್ತೆ ಕಾಮಗಾರಿ ಪ್ರಗತಿಯಲ್ಲಿರುವ ಬಗ್ಗೆ ಡೈವರ್ಸನ್ ಬೋರ್ಡ್ ಇಲ್ಲದಿರುವುದೇ ಅಪಘಾತಕ್ಕೆ ಕಾರಣ ಎನ್ನುವ ಆರೋಪ ಕೇಳಿ ಬರುತ್ತಿದೆ.


