ಧರ್ಮಸ್ಥಳ : 1972ರಿಂದ 2026ರವರೆಗೆ ನಡೆದ ಉಚಿತ ಸಾಮೂಹಿಕ ವಿವಾಹದ ಒಂದು ಮೆಲುಕು ನೋಟ ಇಲ್ಲಿದೆ

ಧರ್ಮಸ್ಥಳ, ಏ. 30 : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏ. 29 2026ರಂದು 54ನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಬಹಳ ಅದ್ಧೂರಿಯಾಗಿ ನೆರವೇರಿತು. 106 ಜೋಡಿಗಳು ಸತಿಪತಿಗಳಾಗಿ ಹೊಸ ಜೀವನಕ್ಕೆ ಕಾಲಿರಿಸಿದರು. 54 ವರ್ಷ ನಡೆದು ಬಂದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಒಂದು ಮೆಲುಕು ನೋಟ ಇಲ್ಲಿದೆ.

Advertisement

ವರದಕ್ಷಿಣೆ ಹಾಗೂ ಮದುವೆಗಾಗಿ ಮಾಡುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಗಳಾದ ಪೂಜ್ಯ ಶ್ರೀ ಡಿ. ವೀರೇಂದ್ರ ಹೆಗ್ಗಡೆಯವರ ನೇತೃತ್ವ ಮತ್ತು ಮಾರ್ಗದರ್ಶನದಲ್ಲಿ ಧರ್ಮಸ್ಥಳದಲ್ಲಿ 1972 ರಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭವನ್ನು ಆರಂಭಿಸಿದ್ದು ಪ್ರಥಮ ವರ್ಷದಲ್ಲಿ 88 ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು.

05-05-1973ರಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ 291 ಜೋಡಿ, 13-03-1974ರಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ 231 ಜೋಡಿ, 29-04-1975ರಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ 484 ಜೋಡಿ, 07-04-1976ರಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ 426 ಜೋಡಿ, 28-04-1977ರಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ 482 ಜೋಡಿ, 27-04-1978ರಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ 440 ಜೋಡಿ, 03-05-1979ರಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ 385 ಜೋಡಿ, 08-05-1900ರಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ 379 ಜೋಡಿ, 19-05-1981ರಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ 420 ಜೋಡಿ, 05-05-1982ರಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ 322 ಜೋಡಿ, 04-05-1983ರಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ 338 ಜೋಡಿ, 03-05-1984ರಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ 336 ಜೋಡಿ, 10-05-1985ರಲ್ಲಿ ನಡೆದ ಸಾಮೂಹಿಕ ವಿವಾಹದಲ್ಲಿ 424 ಜೋಡಿ, 03-05-1986ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 247 ಜೋಡಿ, 07-05-1987ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 292 ಜೋಡಿ, 08-04-1988ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 200 ಜೋಡಿ, 29-04-1989ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 351 ಜೋಡಿ,

27-04-1990ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 310 ಜೋಡಿ, 17-05-1991ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 414 ಜೋಡಿ, 26-04-1992ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 410 ಜೋಡಿ, 05-05-1993ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 375 ಜೋಡಿ, 29-04-1994ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 295 ಜೋಡಿ, 10-05-1995ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 285 ಜೋಡಿ, 02-65-1996ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 338 ಜೋಡಿ, 02-05-1997ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 212 ಜೋಡಿ, 02-05-1998ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 169 ಜೋಡಿ, 26-04-1999ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 245 ಜೋಡಿ,

28-04-2000ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 186 ಜೋಡಿ, 28-04-2001ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 158 ಜೋಡಿ, 28-04-2002ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 143 ಜೋಡಿ, 25-04-2003ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 127 ಜೋಡಿ, 02-04-2004ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 102 ಜೋಡಿ, 28-04-2005ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 133 ಜೋಡಿ, 03-05-2006ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 125 ಜೋಡಿ, 04-05-2007ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 171 ಜೋಡಿ, 30-04-2008ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 207 ಜೋಡಿ, 06-05-2009ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 157 ಜೋಡಿ, 30-04-2010ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 238 ಜೋಡಿ,

27-04-2011ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 192 ಜೋಡಿ, 26-04-2012ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 157 ಜೋಡಿ, 02-05-2013ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 100 ಜೋಡಿ, 02-05-2014ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 142 ಜೋಡಿ, 30-04-2015ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 143 ಜೋಡಿ, 29-04-2016ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 127 ಜೋಡಿ, 04-05-2017ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 102 ಜೋಡಿ, 29-04-2018ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 31 ಜೋಡಿ, 01-05-2019ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 102 ಜೋಡಿ, 29-04-2021ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 150 ಜೋಡಿ, 27-04-2022ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 183 ಜೋಡಿ, 03-05-2023ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 201 ಜೋಡಿ, 01-05-2024ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 123 ಜೋಡಿ, 03-05-2025ರಲ್ಲಿ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 75 ಜೋಡಿ ಸತಿಪತಿಗಳಾಗಿ ಹೊಸ ಜೀವನಕ್ಕೆ ಕಾಲಿರಿಸಿದರು. 1972ರಿಂದ 2026ರವರೆಗೆ 54 ವರ್ಷದಲ್ಲಿ 13100 ಜೋಡಿಗಳು ದಂಪತಿಗಳಾಗಿ ಸುಖಮಯ ಜೀವನಕ್ಕೆ ಕಾಲಿರಿಸಿದ್ದಾರೆ.

ಧರ್ಮಸ್ಥಳದಲ್ಲಿ ಪ್ರತಿ ವರ್ಷ ಏಪ್ರಿಲ್/ಮೇ ತಿಂಗಳಿನಲ್ಲಿ ಉಚಿತ ಸಾಮೂಹಿಕ ವಿವಾಹ ಆಯೋಜಿಸುತ್ತಿದ್ದು ಕಳೆದ ವರ್ಷದ ವರೆಗೆ 12,994 ಜೊತೆ ವಿವಾಹವಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಅಂತರ್ ಜಾತಿಯ ವಿವಾಹಕ್ಕೂ ಹಿರಿಯರ ಒಪ್ಪಿಗೆಯೊಂದಿಗೆ ಅವಕಾಶ ನೀಡಲಾಗುತ್ತದೆ. ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮದುವೆ ಆದವರೆಲ್ಲ ಸುಖ-ಶಾಂತಿ, ದಾಂಪತ್ಯ ಜೀವನ ನಡೆಸುತ್ತಿದ್ದಾರೆ. ಈವರೆಗೆ ಒಂದು ಕೂಡಾ ವಿಚ್ಛೇದನ ಪ್ರಕರಣ ವರದಿಯಾಗಿಲ್ಲ ಎಂಬುದು ಗಮನಿಸಬೇಕಾದ ಅಂಶ. ಸಾಮೂಹಿಕ ವಿವಾಹದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸರ್ಕಾರಿ ನೌಕರರು, ಅಧಿಕಾರಿಗಳು, ಉನ್ನತ ಶಿಕ್ಷಣ ಪಡೆದವರು ಮದುವೆಯಾಗುತ್ತಿರುವುದು ಸ್ತುತ್ಯಾರ್ಹವಾಗಿದೆ. ಸಾಮೂಹಿಕ ವಿವಾಹದಿಂದಾಗಿ ಆನೇಕ ಕುಟುಂಬಗಳು ಸಾಲದ ಶೂಲದಿಂದ ಪಾರಾಗಿವೆ. ಇಂದು ಎಲ್ಲರೂ ಸರಳ ವಿವಾಹಕ್ಕೆ ಆದ್ಯತೆ ನೀಡುತ್ತಿದ್ದಾರೆ. ಅನೇಕ ದೇವಸ್ಥಾನಗಳು, ಮತ-ಮಂದಿರಗಳು ಹಾಗೂ ಸೇವಾಸಂಸ್ಥೆಗಳು ಈ ಸೇವಾಕಾರ್ಯವನ್ನು ಮಾದರಿ ಎಂದು ಸ್ವೀಕರಿಸಿ, ಆನೇಕ ಕಡೆಗಳಲ್ಲಿ ಸಾಮೂಹಿಕ ವಿವಾಹವನ್ನು ನಡೆಸುತ್ತಿರುವುದು ತನಗೆ ಸಂತೋಷ ಮತ್ತು ಧನ್ಯತೆಯನ್ನು ನೀಡಿದೆ ಎಂದು ಪೂಜ್ಯ ಶ್ರೀ ಹೆಗ್ಗಡೆಯವರು ಅಭಿಪ್ರಾಯ ವ್ಯಕ್ತಪಡಿಸುತ್ತಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಕಾನರ್ಪ : ಅಕ್ರಮ ಗೋ ಸಾಗಾಟ – ತಡೆಯಲು ಬಂದ ಸಾರ್ವಜನಿಕರ ಮೇಲೆಯೇ ಪಿಕಪ್ ಹರಿಸಲು ಯತ್ನ !

ಟಾಪ್ ಸುದ್ದಿಗಳು

ಬೆಳ್ತಂಗಡಿ : ಸುಮಂತ್ ಸಾವು ಪ್ರಕರಣ – ಶಾಸಕ ಹರೀಶ್ ಪೂಂಜಾರಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಭೇಟಿ

ಕರಾವಳಿ, ಟಾಪ್ ಸುದ್ದಿಗಳು

ಕುಂದಾಪುರ : ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರಿಗೆ ಶುಭಹಾರೈಸಿದ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

⚠️ Contents are protected on this website.