ನವದೆಹಲಿ : ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ – ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

ನವದೆಹಲಿ, ಜು. 20 : ದೇಶದಲ್ಲಿ ಪ್ರತಿ ವರ್ಷ ಲಕ್ಷಾಂತರ ಜನರನ್ನು ಕಾಡುವ ಡೆಂಗ್ಯೂ ಜ್ವರಕ್ಕೆ ಕೊನೆಗೂ ಬ್ರೇಕ್ ಬೀಳುವ ಸಮಯ ಹತ್ತಿರ ಬಂದಿದೆ. ಡೆಂಗ್ಯೂ ತಡೆಗಟ್ಟುವ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲಿಗಲ್ಲು ಸ್ಥಾಪಿಸಿದ್ದು, ದೇಶದ ಮೊದಲ ಡೆಂಗ್ಯೂ ಲಸಿಕೆ QDENGA ಬಳಕೆಗೆ ಭಾರತೀಯ ಔಷಧ ಮಹಾನಿಯಂತ್ರಕರು (DCGI) ಅಧಿಕೃತ ಅನುಮೋದನೆ ನೀಡಿದ್ದಾರೆ.

ಜಪಾನ್ ಮೂಲದ ಪ್ರಸಿದ್ಧ ಬಯೋಫಾರ್ಮಾ ಕಂಪನಿಯಾದ ‘ಟಕೇಡಾ’ ಈ ಲಸಿಕೆಯನ್ನು ಅಭಿವೃದ್ಧಿಪಡಿಸಿದೆ. ಭಾರತದಲ್ಲಿ 4 ರಿಂದ 60 ವರ್ಷದೊಳಗಿನ ಯಾರು ಬೇಕಾದರೂ ಈ ಲಸಿಕೆಯನ್ನು ಪಡೆದುಕೊಳ್ಳಬಹುದು ಎಂದು ಹೆಲ್ತ್‌ ಅಥಾರಿಟಿ ತಿಳಿಸಿದೆ.

ಈ ಲಸಿಕೆಯ ಪ್ರಮುಖ ವಿಶೇಷತೆಯೆಂದರೆ, ಇದನ್ನು ಪಡೆಯುವ ಮುನ್ನ ವ್ಯಕ್ತಿಗೆ ಡೆಂಗ್ಯೂ ಪರೀಕ್ಷೆ ಮಾಡುವ ಅಗತ್ಯವಿರುವುದಿಲ್ಲ. ಈ ಹಿಂದೆ ಡೆಂಗ್ಯೂ ಬಂದಿರಲಿ ಅಥವಾ ಬಾರದಿರಲಿ, ಮುಂಜಾಗ್ರತಾ ಕ್ರಮವಾಗಿ ಲಸಿಕೆ ತೆಗೆದುಕೊಳ್ಳಬಹುದು. ಒಟ್ಟು ಎರಡು ಡೋಸ್‌ಗಳಲ್ಲಿ ಈ ವ್ಯಾಕ್ಸಿನ್ ನೀಡಲಾಗುತ್ತಿದ್ದು, ಮೊದಲ ಡೋಸ್ ಪಡೆದ ಮೂರು ತಿಂಗಳ ಬಳಿಕ ಎರಡನೇ ಡೋಸ್ ಪಡೆಯಬೇಕಾಗುತ್ತದೆ. ಡೆಂಗ್ಯೂ ವೈರಸ್‌ನ ಎಲ್ಲಾ ನಾಲ್ಕು ವಿಧದ ರೂಪಾಂತರಗಳ ವಿರುದ್ಧವೂ ಇದು ಪರಿಣಾಮಕಾರಿಯಾಗಿ ಹೋರಾಡಬಲ್ಲದು.

ಈ ಲಸಿಕೆಗೆ ಅನುಮೋದನೆ ನೀಡುವ ಮುನ್ನ ಸುಮಾರು 19 ಹಂತಗಳ ಕಠಿಣ ಕ್ಲಿನಿಕಲ್ ಪರೀಕ್ಷೆಗಳನ್ನು ನಡೆಸಲಾಗಿದೆ. ಜಾಗತಿಕವಾಗಿ 28 ಸಾವಿರಕ್ಕೂ ಹೆಚ್ಚು ಜನರು ಈ ಪ್ರಯೋಗದಲ್ಲಿ ಭಾಗಿಯಾಗಿದ್ದರು. ಭಾರತದಲ್ಲೂ 3ನೇ ಹಂತದ ಕ್ಲಿನಿಕಲ್ ಟ್ರಯಲ್ಸ್ ನಡೆಸಿ, ಸುರಕ್ಷತೆಯನ್ನು ಖಚಿತಪಡಿಸಿಕೊಂಡ ಬಳಿಕವೇ ಗ್ರೀನ್ ಸಿಗ್ನಲ್ ನೀಡಲಾಗಿದೆ.

ಈಗಾಗಲೇ ವಿಶ್ವದ 43 ದೇಶಗಳಲ್ಲಿ ಬಳಕೆಯಲ್ಲಿರುವ ಈ ಲಸಿಕೆಯನ್ನು ಇದುವರೆಗೆ 3.2 ಕೋಟಿಗೂ ಹೆಚ್ಚು ಜನರಿಗೆ ನೀಡಲಾಗಿದೆ. ವಿಶ್ವ ಆರೋಗ್ಯ ಸಂಸ್ಥೆ (WHO) ಕೂಡ ಈ ಲಸಿಕೆಯ ಗುಣಮಟ್ಟ ಮತ್ತು ಸುರಕ್ಷತೆಯನ್ನು ಪರಿಶೀಲಿಸಿ, ಡೆಂಗ್ಯೂ ಪೀಡಿತ ಪ್ರದೇಶಗಳಲ್ಲಿ ಬಳಸಲು ಗ್ರೀನ್ ಸಿಗ್ನಲ್ ನೀಡಿದೆ. ಹವಾಮಾನ ಬದಲಾವಣೆ ಹಾಗೂ ಸೊಳ್ಳೆಗಳ ಕಾಟದಿಂದ ಡೆಂಗ್ಯೂ ಹೆಚ್ಚುತ್ತಿರುವ ಭಾರತದಲ್ಲಿ, ಈ ಲಸಿಕೆ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಸೃಷ್ಟಿಸಲಿದೆ ಎಂದು ತಜ್ಞರು ಆಶಿಸಿದ್ದಾರೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.