ಬೆಳ್ತಂಗಡಿ: ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಅಗ್ರಮಾಣ್ಯ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರವು ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿಯು ಪೆರಾಡಿ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸತೀಶ್ ಕಾಶಿಪಟ್ಟ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ.



ಅವರಿಗೆ ನ.14 ರಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರಧಾನ ಮಾಡಿದರು.ಪ್ರಸ್ತುತ ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕರಾಗಿ, ಬೆಳ್ತಂಗಡಿ ಸಹಕಾರಿ ಮಾರಾಟ ಮಂಡಳಿಯ ಅಧ್ಯಕ್ಷರಾಗಿ, ಕಾಶಿಪಟ್ಟ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸುಮಾರು 25 ವರ್ಷಗಳಿಂದ ಸಹಕಾರಿ ಕ್ಷೇತ್ರದಲ್ಲಿ ಮಾಡಿದ ಅಗ್ರಮಾಣ್ಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

