ಮಂಗಳೂರು : ಸಿಸಿಬಿ ಪೊಲೀಸರ ದಾಳಿ – ಮಾದಕವಸ್ತು ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ

ಮಂಗಳೂರು : ಮಾದಕ ವಸ್ತುಗಳ ಮಾರಾಟದ ವಿರುದ್ಧ  ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ, ನಗರದ ಸಾರ್ವಜನಿಕರಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ (MDMA) ಸರಬರಾಜು ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ.


ಪ್ರಕರಣ:1
ಕಾರ್ಯಾಚರಣೆಯ ಸಮಯದಲ್ಲಿ ಪೊಲೀಸರು ಒಟ್ಟು 24.57 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿ ಮಂಗಳೂರಿನ ಕಣ್ಣೂರಿನ ಅಡ್ಯಾರ್‌ನ ಎಸ್‌ಎಚ್ ನಗರ ದಯಾಂಬು ನಿವಾಸಿ ಆಟೋ ಚಾಲಕ ಅಬ್ದುಲ್ ಸಲಾಂ (39) ಎಂದು ಗುರುತಿಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ನವೆಂಬರ್ 4 ರಂದು ಮಂಗಳೂರು ಬಂದರು ಮತ್ತು ಡಾಕ್ ಪ್ರದೇಶದ ಸುತ್ತಮುತ್ತ ದಾಳಿ ನಡೆಸಿದ್ದಾರೆ. ವಾಹನವನ್ನು ಶೋಧಿಸಿದಾಗ, ಅಧಿಕಾರಿಗಳು 1,20,000 ರೂ. ಮೌಲ್ಯದ ಎಂಡಿಎಂಎ, ಒಂದು ಆಟೋರಿಕ್ಷಾ, ಮೊಬೈಲ್ ಫೋನ್, ತೂಕದ ಮಾಪಕ ಮತ್ತು ಖಾಲಿ ಜಿಪ್-ಲಾಕ್ ಕವರ್‌ ಸೇರಿದಂತೆ ಒಟ್ಟು ಸುಮಾರು 2,30,500 ರೂ. ಮೌಲ್ಯ ವಶಪಡಿಸಿಕೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣ-2
ನವೆಂಬರ್ 6 ರಂದು ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ, ಬೊಳಿಯಾರು ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ವ್ಯಕ್ತಿಯೊಬ್ಬರು ಮಾದಕ ದ್ರವ್ಯಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ಸಿಸಿಬಿ ತಂಡಕ್ಕೆ ಮಾಹಿತಿ ಸಿಕ್ಕಿತ್ತು. ಆರೋಪಿ ಮಂಗಳೂರು ಉಳ್ಳಾಲ ತಾಲೂಕು ಬೊಳಿಯಾರು ಜರದಗುಡ್ಡೆ ನಿವಾಸಿ ಮೊಹಮ್ಮದ್ ನಾಸೀರ್ ಅಲಿಯಾಸ್ ಶಾಕಿರ್ ಅಲಿಯಾಸ್ ಚಾಕಿ (28) ಎಂಬಾತನನ್ನು ಬಂಧಿಸಲಾಯಿತು.

ಆತನಿಂದ 1,20,000 ರೂ. ಮೌಲ್ಯದ ಎಂಡಿಎಂಎ, ಒಂದು ಕಪ್ಪು ಯಮಹಾ ಎಫ್‌ಝಡ್ ಬೈಕ್, ಒಂದು ಮೊಬೈಲ್ ಫೋನ್ ಸೇರಿದಂತೆ ಒಟ್ಟು 2,05,000 ರೂ. ಮೌಲ್ಯದ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

⚠️ Contents are protected on this website.