ಮಾಲಾಡಿ : ಕಳವಿಗೆ ಯತ್ನ – ಆರೋಪಿಗೆ ಸಾರ್ವಜನಿಕರಿಂದ ಧರ್ಮದೇಟು, ಪೊಲೀಸ್ ವಶಕ್ಕೆ

Advertisement

ಮಾಲಾಡಿ : ಮನೆ ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ ಸಿಕ್ಕಿ ಬಿದ್ದ ವ್ಯಕ್ತಿಯೊಬ್ಬನಿಗೆ ಸಾರ್ವಜನಿಕರು ಧರ್ಮದೇಟು ನೀಡಿ, ಪೊಲೀಸರಿಗೆ ಒಪ್ಪಿಸಿದ ಘಟನೆ ಮಾಲಾಡಿಯ ಬರ್ನ ಎಂಬಲ್ಲಿ ನಡೆದಿದೆ.

ಪ್ರಕರಣದ ಆರೋಪಿಯನ್ನು ಚೇತನ್ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆ ಕಳವಿಗೆ ಯತ್ನಿಸುತ್ತಿದ್ದ ಎಂದು ಆರೋಪಿಸಲಾಗಿದೆ. ಕಳ್ಳತನಕ್ಕೆ ಯತ್ನಿಸುತ್ತಿದ್ದ ವೇಳೆ ಗಮನಿಸಿದ ನೆರೆಮನೆಯವರು ಸಾರ್ವಜನಿಕರ ಮೂಲಕ ಧರ್ಮದೇಟು ನೀಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಸದ್ಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Advertisement

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ