ಬೆಂಗಳೂರು, ಜ. 10 : ಹತ್ತನೇ ತರಗತಿಯ ಪೂರ್ವ ಸಿದ್ಧತಾ ಪರೀಕ್ಷೆಯ ಸಮಾಜ ವಿಜ್ಞಾನ ಪರೀಕ್ಷೆ ಇಂದು ನಡಿತಾ ಇದ್ದು, ಅದರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ delta_kannadiga ಎನ್ನುವ instagram ಪೇಜ್ ನಲ್ಲಿ ಪ್ರಶ್ನೆಪತ್ರಿಕೆ ವೈರಲ್ ಆಗಿದ್ದು, ಆತಂಕ ಮೂಡಿದೆ. ಹಿಂದಿನ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಕೂಡ ಸೋರಿಕೆಯಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ವಿದ್ಯಾರ್ಥಿ ಪೋಷಕರು ಆಗ್ರಹಿಸಿದ್ದಾರೆ.


