ಫ್ರೀ ಫೈರ್ ಗೇಮ್ ಆಪ್‌ನಲ್ಲಿ ಹಣ ಹಾಕುವಂತೆ ಒತ್ತಾಯಿಸಿ, ಕೊಲೆ ಬೆದರಿಕೆ – ಸ್ನೇಹಿತರ ಟಾರ್ಚರ್ ಗೆ ಮನನೊಂದು 13 ವರ್ಷದ ಬಾಲಕ ನೇಣಿಗೆ ಶರಣು

ದಾವಣಗೆರೆ, ಅ. 08 : ಆನ್‌ಲೈನ್ ಗೇಮ್ ಗೀಳಿನಿಂದ ಸ್ನೇಹಿತರು ನೀಡಿದ ಟಾರ್ಚರ್‌ಗೆ ಬೇಸತ್ತು ಬಾಲಕನೊಬ್ಬ ನೇಣಿಗೆ ಶರಣಾದ ಘಟನೆ ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿಯಲ್ಲಿ ನಡೆದಿದೆ.

ಮನೋಜ್ ಟಿ.ಆರ್ (13) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕ. ಗ್ರಾಮದ ನಾಲ್ವರು ಬಾಲಕರು ಫ್ರೀ ಫೈರ್ ಗೇಮ್ ಆಪ್‌ನಲ್ಲಿ ಹಣ ಹಾಕುವಂತೆ ಒತ್ತಾಯಿಸಿದ್ದರು. ಹಣ ತರದೇ ಇದ್ದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಇದೇ ಕಾರಣಕ್ಕೆ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಸ್ನೇಹಿತರು ಒತ್ತಾಯಕ್ಕೆ ಮನೆಯಿಂದ ಸುಮಾರು 4 ಲಕ್ಷ ರೂ. ಹಣವನ್ನು ಮನೋಜ್‌ ತೆಗೆದುಕೊಂಡುಹೋಗಿದ್ದ. ಮನೆಯಲ್ಲಿ ಇಟ್ಟಿದ್ದ ಹಣದಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆ, ಪರಿಶೀಲನೆ ನಡೆಸಿದಾಗ ನಾಲ್ವರು ಹಣ ತರುವಂತೆ ಒತ್ತಾಯಿಸಿರುವುದು ಗೊತ್ತಾಗಿದೆ. ಅಲ್ಲದೇ ಹಣಕ್ಕಾಗಿ ಮಗನ ಮೇಲೆ ಹಲ್ಲೆ ಸಹ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

ಈ ಸಂಬಂಧ ಚನ್ನಗಿರಿ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ: ವಿಟ್ಲದ ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕುಪ್ಪೆಟ್ಟಿ – ಉಪ್ಪಿನಂಗಡಿ ರಸ್ತೆ ವಿರುದ್ಧ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು