ರಾಜ್ಯದಲ್ಲಿ 15 ವರ್ಷಕ್ಕಿಂತ ಹಳೆಯ ವಾಹನಗಳು ಇನ್ನು ಗುಜರಿಗೆ !

ಬೆಳಗಾವಿ, ಡಿ. 18 : ರಾಜ್ಯದಲ್ಲಿನ ಎಲ್ಲಾ ಸರಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ ಹಾಗೂ ಸರಕಾರದ ಅಧೀನ ಸಂಸ್ಥೆಗಳಿಗೆ ಸೇರಿದ 15 ವರ್ಷಕ್ಕಿಂತ ಹಳೆಯ ವಾಹನಗಳನ್ನು ಕಡ್ಡಾಯವಾಗಿ ಸ್ಕ್ರ್ಯಾಪ್ ಮಾಡುವುದಕ್ಕೆ ರಾಜ್ಯ ಸರಕಾರ ಅನುಮೋದನೆ ನೀಡಿದೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

Advertisement

ಡಿಸೆಂಬರ್ 17ರಂದು ವಿಧಾನಪರಿಷತ್ತಿನಲ್ಲಿ ಸದಸ್ಯ ಗೋವಿಂದ ರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸೆಪ್ಟೆಂಬರ್ 12ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಲಾಗಿದೆ ಎಂದರು. ಹದಿನೈದು ವರ್ಷ ಮೀರಿದ ಎಲ್ಲಾ ಸರಕಾರಿ ವಾಹನಗಳನ್ನು ರಾಜ್ಯದಲ್ಲಿ ಸ್ಥಾಪಿತವಾಗಿರುವ ನೋಂದಾಯಿತ ವಾಹನ ಸ್ಕ್ಯಾಪಿಂಗ್ ಕೇಂದ್ರಗಳಲ್ಲಿಯೇ (RVSF) ನಾಶಪಡಿಸಬೇಕು ಎಂದು ಸ್ಪಷ್ಟಪಡಿಸಿದರು.

ಎನ್.ಐ.ಸಿ ನೀಡಿದ ಮಾಹಿತಿಯಂತೆ, 2025ರ ಡಿಸೆಂಬರ್ 4ರ ತನಕ ಸಾರಿಗೆ ಸಂಸ್ಥೆಗಳ ಬಸ್ಸುಗಳನ್ನು ಹೊರತುಪಡಿಸಿ ಒಟ್ಟು 18,552 ಸರಕಾರಿ ವಾಹನಗಳ ನೋಂದಣಿ ರದ್ದುಪಡಿಸಲಾಗಿದೆ. ಇದರಲ್ಲಿ ಈಗಾಗಲೇ 1,493 ವಾಹನಗಳನ್ನು ಸ್ಕ್ಯಾಪ್ ಮಾಡಲಾಗಿದ್ದು, ಉಳಿದ 17,059 ವಾಹನಗಳನ್ನು ಇನ್ನೂ ಸ್ಕ್ಯಾಪ್ ಮಾಡಬೇಕಿದೆ ಎಂದು ಸಚಿವರು ತಿಳಿಸಿದರು. ಇನ್ನೂ, 2023ರಿಂದ ಇಲ್ಲಿವರೆಗೆ ರಾಜ್ಯದ ನಾಲ್ಕು ನಿಗಮ ಸಂಸ್ಥೆಗಳಲ್ಲಿ 3,212 ವಾಹನಗಳನ್ನು ನಿಷ್ಕ್ರಿಯಗೊಳಿಸಲಾಗಿದೆ. ಈ ಪೈಕಿ 579 ವಾಹನಗಳ ನಿಷ್ಕ್ರಿಯಗೊಳಿಸುವ ಪ್ರಕ್ರಿಯೆ ಬಾಕಿ ಇದೆ ಎಂದು ಅವರು ಮಾಹಿತಿ ನೀಡಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

ರಾಜ್ಯ / ದೇಶ

ಫೆ.26ಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಭೇಟಿ

ಕ್ರೀಡೆ, ತಾಲೂಕು, ಬೆಳ್ತಂಗಡಿ

ಬಂಗಾಡಿ : ಯುವ ಸಂಗಮ ಸೇವಾ ಸಮಿತಿ ಬೆಳ್ತಂಗಡಿ ವತಿಯಿಂದ “ಯುವ ಸಂಗಮ ಪ್ರೀಮಿಯರ್ ಲೀಗ್” ಕ್ರಿಕೆಟ್ ಪಂದ್ಯಾಟ

⚠️ Contents are protected on this website.