’16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್‌ ಮೀಡಿಯಾ ಬಳಕೆ ನಿಷೇಧ’- ಸಿಎಂ ಸಿದ್ಧರಾಮಯ್ಯ ಘೋಷಣೆ

ಬೆಂಗಳೂರು, 06 : ರಾಜ್ಯದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು.

Advertisement

2026-27ನೇ ಸಾಲಿನ ಬಜೆಟ್‌ ಮಂಡನೆ ವೇಳೆ ಮಾತನಾಡಿದ ಅವರು, ಹೆಚ್ಚುತ್ತಿರುವ ಮೊಬೈಲ್‌ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು ಎಂದು ತಿಳಿಸಿದರು.

ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು, ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು ಎಂದರು.

1 ರಿಂದ 10ನೇ ತರಗತಿಯವರೆಗೆ ಮೌಲ್ಯ ಶಿಕ್ಷಣ ಪುಸ್ತಕಗಳನ್ನು ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು. ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಮತ್ತು ಪಿಯು ಕಾಲೇಜುಗಳಲ್ಲಿ ಹೊಸ ಕೊಠಡಿ ನಿರ್ಮಾಣ ಮತ್ತು ಕೊಠಡಿಗಳ ದುರಸ್ತಿ ಕಾಮಗಾರಿಗಳಿಗೆ 565 ಕೋಟಿ ರೂ., ಶೌಚಾಲಯ ನಿರ್ಮಾಣಕ್ಕಾಗಿ 75 ಕೋಟಿ ರೂ. ಹಾಗೂ ಶಾಲೆಗಳಿಗೆ ಪೀಠೋಪಕರಣಗಳನ್ನು ಖರೀದಿಸಲು 25 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು ಎಂದು ತಿಳಿಸಿದರು.

2026-27ನೇ ಸಾಲಿನಲ್ಲಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು.ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 BRC ಕೇಂದ್ರಗಳಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರು ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಲಾಗುವುದು ಎಂದು ತಿಳಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.