ತಿರುವನಂತಪುರಂ : ತುಟಿಯ ಶಸ್ತ್ರಚಿಕಿತ್ಸೆಗಾಗಿ ಅನಸ್ತೇಶಿಯಾ – 18 ತಿಂಗಳ ಮಗು ಸಾವು !

Advertisement

ತಿರುವನಂತಪುರಂ, ಜು. 11 : ವೈದ್ಯರು ತುಟಿಯ ಶಸ್ತ್ರಚಿಕತ್ಸೆಗಾಗಿ ಅನಸ್ತೇಶಿಯಾ ನೀಡಿದ ನಂತರ 18 ತಿಂಗಳ ಮಗು ಪ್ರಜ್ಞೆ ಕಳೆದುಕೊಂಡು ಸಾವನ್ನಪ್ಪಿರುವ ಘಟನೆ ಕೇರಳದ ಕಣ್ಣೂರು ಆಸ್ಪತ್ರೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.

Advertisement

ಕಣ್ಣೂರಿನ ಎರಾಮಮ್-ಕುತ್ತೂರು ನಿವಾಸಿಗಳಾದ ಟಿ ಸೂರಜ್ ಮತ್ತು ವಿಜಿಶಾ ದಂಪತಿಯ ಏಕೈಕ ಪುತ್ರ ದೇವಾಂಶ್ ಶೌರ್ಯ ಜುಲೈ 5 ರಂದು ಮನೆಯ ಹೊರಗೆ ಆಟವಾಡುತ್ತಿದ್ದಾಗ ಬಿದ್ದು ತುಟಿ ಸೀಳು ಬಿಟ್ಟಿತ್ತು. ಪೋಷಕರು ಮಗುವನ್ನು ತಕ್ಷಣವೇ ಮತಾಮಂಗಲಂ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಪ್ರಥಮ ಚಕಿತ್ಸೆ ಕೊಡಿಸಿದ್ದರು. ನಂತರ ಮಗುವನ್ನು ಪಯ್ಯನ್ನೂರು ಬೇಬಿ ಮೆಮೊರಿಯಲ್ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿ ಮಗುವಿಗೆ ಅನಸ್ತೇಶಿಯಾ ನೀಡಿ ಶಸ್ತ್ರಕ್ರಿಯೆ ನಡೆಸಿ ಹೊಲಿಗೆ ಹಾಕಿದ್ದು, ನಂತರ ಮಗು ಪ್ರಜ್ಞೆ ಕಳೆದುಕೊಂಡಿರುವುದಾಗಿ ಪೋಷಕರು ಆರೋಪಿಸಿದ್ದಾರೆ.

Advertisement

ಕಣ್ಣೂರಿನ ಬೇಬಿ ಮೆಮೊರಿಯಲ್ ಆಸ್ಪತ್ರೆಯಲ್ಲಿ ಜು.10ರಂದು ರಾತ್ರಿ 9ಗಂಟೆಗೆ ಮಗು ಕೊನೆಯುಸಿರೆಳೆದಿರುವುದಾಗಿ ವರದಿ ವಿವರಿಸಿದೆ. ಕಣ್ಣೂರು ಆಸ್ಪತ್ರೆಯ ವೈದ್ಯೆ ಅಂಜಲಿ ಪೊದುವಾಳ್ ನಿರ್ಲಕ್ಷ್ಯದಿಂದಲೇ ಮಗು ಸಾವನ್ನಪ್ಪಿರುವುದಾಗಿ ಮಗುವಿನ ಪೋಷಕರು ದೂರು ದಾಖಲಿಸಿದ್ದಾರೆ. ಆದರೆ ವೈದ್ಯರ ಪ್ರಕಾರ ಮಗು ಹೃದಯ ಸ್ತಂಭನದಿಂದ ಸಾವನ್ನಪ್ಪಿರುವುದಾಗಿ ಸಮಜಾಯಿಷಿ ನೀಡಿದ್ದಾರೆ. ವೈದ್ಯೆ ಅಂಜಲಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 125 ಅಡಿ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ