ಏಪ್ರಿಲ್ 9ರಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟ – ಆನ್‌ಲೈನ್‌ನಲ್ಲಿ ಫಲಿತಾಂಶ ವೀಕ್ಷಿಸುವುದು ಹೇಗೆ ?

ಬೆಂಗಳೂರು, ಏ. 07 : ಏಪ್ರಿಲ್ 9ರಂದು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎಂದು ಅಧಿಕೃತ ಮೂಲಗಳಿಂದ ತಿಳಿದುಬಂದಿದೆ.

Advertisement

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಏಪ್ರಿಲ್ 9ರಂದು 2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲು ಸಕಲ ಸಿದ್ಧತೆ ನಡೆಸಿದೆ. ಮಂಡಳಿಯು ಮೊದಲು ಸುದ್ದಿಗೋಷ್ಠಿಯ ಮೂಲಕ ಫಲಿತಾಂಶದ ವಿವರಗಳನ್ನು ಹಂಚಿಕೊಂಡು, ನಂತರ ಅಧಿಕೃತ ವೆಬ್‌ಸೈಟ್‌ಗಳಾದ kseab.karnataka.gov.in ಅಥವಾ karresults.nic.in ನಲ್ಲಿ ಫಲಿತಾಂಶ ಪ್ರಕಟಿಸಲಿದೆ.

ಆನ್‌ಲೈನ್‌ನಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ನೋಡುವ ವಿಧಾನ:

  • ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.
  • ಮುಖಪುಟದಲ್ಲಿರುವ ‘Karnataka 2nd PUC Result 2026‘ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ನಿಮ್ಮ ರಿಜಿಸ್ಟ್ರೇಶನ್ ನಂಬರ್ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
  • ‘Submit’ ಬಟನ್ ಒತ್ತಿದ ತಕ್ಷಣ ನಿಮ್ಮ ಅಂಕಪಟ್ಟಿ ಪರದೆಯ ಮೇಲೆ ಕಾಣಿಸುತ್ತದೆ.

ಫಲಿತಾಂಶದ ನಂತರ ವಿದ್ಯಾರ್ಥಿಗಳಿಗೆ ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗದ ವಿದ್ಯಾರ್ಥಿಗಳಿಗೆ ಏಪ್ರಿಲ್ 25 ರಿಂದ ಮೇ ಮೊದಲ ವಾರದವರೆಗೆ ಪೂರಕ ಪರೀಕ್ಷೆಗಳನ್ನು ನಡೆಸಲು ಮಂಡಳಿ ಚಿಂತನೆ ನಡೆಸಿದ ಎನ್ನಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ, ಬೆಳ್ತಂಗಡಿ

ಉಪ್ಪಿನಂಗಡಿ : ಲಾವಣ್ಯ ಹತ್ಯೆಗೆ ಚೇತನ್ ತಲ್ವಾರ್ ಖರೀದಿಸಿದ್ದು ಉಪ್ಪಿನಂಗಡಿ ಕೃಷಿ ಕೇಂದ್ರದಿಂದ !

ಟಾಪ್ ಸುದ್ದಿಗಳು

ಮುಂಬೈ : ಭಾರತದಲ್ಲಿ ಸದ್ದು ಮಾಡುತ್ತಿದೆ “ರಾಮಾಯಣ” ಸಿನಿಮಾ – ಯಶ್ ಪಾತ್ರಕ್ಕೆ ಪಾತ್ರಕ್ಕೆ ಕನ್ನಡಿಗರು ಫಿದಾ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಧರ್ಮಸ್ಥಳ : ಬುರುಡೆ ಪ್ರಕರಣ – ಬಂಗ್ಲೆಗುಡ್ಡೆಯಲ್ಲಿ ಪತ್ತೆಯಾದ ಅಸ್ಥಿಪಂಜರ ಪುರುಷರದ್ದು ! ಎಫ್ ಎಸ್ ಎಲ್ ವರದಿಯಲ್ಲಿ ದೃಢ

⚠️ Contents are protected on this website.