ಮಂಗಳೂರು : ಮಂಗಳೂರು ಕಾರಾಗ್ರಹದಲ್ಲೂ 4 ಮೊಬೈಲ್ ಪತ್ತೆ ! ಎರಡು ಗುಂಪುಗಳ ನಡುವೆ ಸಂಘರ್ಷ

Advertisement

ಮಂಗಳೂರು, ಡಿ. 18 : ಕರ್ನಾಟಕದಲ್ಲಿ ಜೈಲಿನೊಳಗಡೆ ಐಷಾರಾಮಿ ಜೀವನದ ಬಗ್ಗೆ ವಿಪಕ್ಷಗಳು ಆರೋಪಿಸುತ್ತಲೇ ಇದೆ. ಈ ಮಧ್ಯೆ ಮಂಗಳೂರಿನ ಜಿಲ್ಲಾ ಕಾರಾಗ್ರಹದೊಳಗಡೆ ಕೂಡಾ 4 ಮೊಬೈಲ್ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಿಲ್ಲಾ ಕಾರಾಗೃಹದೊಳಗೆ ಎರಡು ಗುಂಪುಗಳ ನಡುವೆ ಹೊಡೆದಾಟ ಘಟನೆ ನಡೆದ ಬಳಿಕ ಪೊಲೀಸರು ಕಾರ್ಯಾಚರಣೆ ನಡೆಸಿದಾಗ ಜೈಲಿನ ಕೊಠಡಿಯೊಳಗೆ ಒಟ್ಟು 4 ಮೊಬೈಲ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಕಾರಾಗಹ ಅಧೀಕ್ಷಕ ಶರಣಬಸಪ್ಪ ಅವರು ಸೋಮವಾರ ಅನಿರೀಕ್ಷಿತ ತಪಾಸಣೆಗೆ ಹೋದಾಗ ವಿಚಾರಣಾಧೀನ ಕೈದಿಗಳು ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಅದೇ ದಿನ ಮತ್ತೆ ಅನಿರೀಕ್ಷಿತ ತಪಾಸಣೆ ಮಾಡಲಾಗಿತ್ತು. ಸಂಜೆ ಕೈದಿಗಳು ಎರಡು ವಿಭಾಗಗಳ ಕಬ್ಬಿಣದ ಗೇಟ್‌ಗಳನ್ನು ಅಲ್ಲಾಡಿಸುತ್ತಾ ಮುರಿಯುವ ರೀತಿಯಲ್ಲಿ ಜೋರಾಗಿ ಕೂಗಾಡುತ್ತಾ ಗಲಾಟೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಕೂಡಲೇ ಮಂಗಳೂರು ನಗರ ಪೊಲೀಸರು, ವಿಶೇಷ ಕಾರ್ಯಪಡೆ ಹಾಗೂ ಠಾಣೆಯ ಅಧಿಕಾರಿ, ಸಿಬ್ಬಂದಿ ಕಾರಾಗಹದಲ್ಲಿನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದರು.

Advertisement

ಇದೇ ಸಮಯದಲ್ಲಿ ಪೊಲೀಸರು ತಪಾಸಣೆ ನಡೆಸಿದಾಗ 2 ಕೊಠಡಿಗಳಲ್ಲಿ ಗಲಾಟೆಗೆ ಸಂಬಂಸಿದಂತೆ ಪರಿಸ್ಥಿತಿ ನಿಯಂತ್ರಣಗೊಂಡ ಅನಂತರ ಸಿ.ಸಿ.ಟಿ.ವಿ ದಶ್ಯಾವಳಿಗಳನ್ನು ಪರಿಶೀಲಿಸಿದಾಗ ಗಲಾಟೆಯಲ್ಲಿ ‘ಎ’ ವಿಭಾಗದ ಮೊಯಿದ್ದಿನ್ ಫರಾದ್, ಸರ್ಫರಾಜ್, ಮೊಹಮ್ಮದ್ ಅಲ್ತಾಫ್, ಇಮ್ತಿಯಾಜ್, ಅಬ್ದುಲ್ ನೌಜೀದ್, ಮೊಹಮ್ಮದ್ ಸಾಯಿಲ್ ಅಕ್ರಂ ಮತ್ತು ಮಹಮ್ಮದ್ ಹನೀಫ್ ಹಾಗೂ ‘ಬಿ’ ವಿಭಾಗದ ಲತೇಶ್ ಜೋಗಿ , ಮಂಜುನಾಥ , ಮುರುಗನ್, ಸಚಿನ್ ತಲಪಾಡಿ, ತುಷಾರ್ ಅಮೀನ್, ಶಬರೀಶ, ಗುರುರಾಜ ಹಾಗೂ ಸುಮಂತ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದು ಕಂಡು ಬಂದಿದ್ದು ,ಅವರ ವಿರುದ್ದ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ