ಬೆಳಗಾವಿ : 7ನೇ ತರಗತಿ ಬಾಲಕಿಯನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿದ ಪಾಪಿಗಳು !

Advertisement

ಬೆಳಗಾವಿ : ಜಿಲ್ಲೆಯ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 7ನೇ ತರಗತಿ ಬಾಲಕಿ ಮೇಲೆ ಇಬ್ಬರು ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಆರೋಪ ಕೇಳಿಬಂದಿದೆ. ಮಣಿಕಂಠ ದಿನ್ನಿಮನಿ (28) ಮತ್ತು ಮತ್ತೊಬ್ಬ ಆರೋಪಿ ಈರಣ್ಣ ಸಂಕಮ್ಮನವರ್ ಮೇಲೆ ಪ್ರಕರಣ ದಾಖಲಾಗಿದೆ.

Advertisement

ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿರುವ ಹಿಟ್ಟಿನ ಗಿರಣಿಗೆ ತೆರಳಿದ್ದ ಬಾಲಕಿಯನ್ನು, ಆರೋಪಿಗಳು ಕಬ್ಬಿನ ಗದ್ದೆಗೆ ಎಳೆದೊಯ್ದು ಅತ್ಯಾಚಾರ ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖವಾಗಿದೆ. ಘಟನೆ ನವೆಂಬರ್ 23ರಂದು ನಡೆದಿದ್ದರೂ, ಆರೋಪಿಗಳು ಜೀವ ಬೆದರಿಕೆ ಹಾಕಿದ ಕಾರಣ ಬಾಲಕಿಯ ಕುಟುಂಬಸ್ಥರು ದೂರು ನೀಡಲು ಹಿಂಜರಿದಿದ್ದರು ಎನ್ನಲಾಗಿದೆ. ನಿನ್ನೆ ದೂರು ದಾಖಲಾಗಿದ್ದು, ಪೊಲೀಸರು ಪೋಕೋ ಕಾಯ್ದೆಯ ಅಡಿಯಲ್ಲಿ ದಾಖಲಿಸಿಕೊಂಡಿದ್ದಾರೆ. ಅತ್ಯಾಚಾರ ಎಸಗಿದ ನಂತರ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದು, ಆರೋಪಿಗಳನ್ನು ಸೆರೆ ಹಿಡಿಯಲು ಪೊಲೀಸರು ಬಲೆ ಬೀಸಿದ್ದಾರೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ