ಸುಳ್ಯ : ಆಸ್ಪತ್ರೆಗೆ ಸಾಗಿಸುವ ವೇಳೆ ಹೃದಯಾಘಾತ – 9ನೇ ತರಗತಿ ವಿದ್ಯಾರ್ಥಿ ಸಾವು !

ಸುಳ್ಯ, ಜು. 7 : 14 ವರ್ಷದ 9 ನೇ ತರಗತಿ ವಿದ್ಯಾರ್ಥಿಯೋರ್ವ ಆಸ್ಪತ್ರೆಗೆ ಸಾಗಿಸುವಾಗ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ.

Advertisement

ಮೃತನನ್ನು ಎಡಮಂಗಲ ಗ್ರಾಮದ ಕರಿಂಬಿಲ ನಿವಾಸಿ ಮತ್ತು ಎನ್ನೂರು ಪ್ರೌಢಶಾಲೆಯ ವಿದ್ಯಾರ್ಥಿ ಶಿಶಿಲ್ (14) ಎಂದು ಗುರುತಿಸಲಾಗಿದೆ.

ಕುಟುಂಬದ ಮೂಲಗಳ ಪ್ರಕಾರ, ಶಿಶಿಲ್ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ, ಹೀಗಾಗಿ ಆತನನ್ನು ಕಾಣಿಯೂರು, ಪುತ್ತೂರು ಮತ್ತು ಮಂಗಳೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೂ ಬಾಲಕನ ಆರೋಗ್ಯ ಸ್ಥಿತಿ ಸುಧಾರಿಸದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಜುಲೈ 6, ಸೋಮವಾರದಂದು ಬೆಂಗಳೂರಿಗೆ ಕರೆದೊಯ್ಯಲು ಮುಂದಾಗಿದ್ದರು. ಆದರೆ, ಭಾನುವಾರ ರಾತ್ರಿ ಅವರ ಆರೋಗ್ಯ ಹಠಾತ್ತನೆ ಹದಗೆಟ್ಟಿತ್ತು, ಮನೆಯವರು ತಕ್ಷಣ ಬಾಲಕನನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದರು. ಆದರೆ ದಾರಿಯ ಮಧ್ಯೆ ಹೃದಯಾಘಾತದಿಂದ ಬಾಲಕ ನಿಧನ ಹೊಂದಿದ್ದಾರೆ.

ಶಿಶಿಲ್ ಪೋಷಕರು ಮತ್ತು ಒಬ್ಬ ಸಹೋದರನ್ನು ಅಗಲಿದ್ದಾರೆ. ಒಬ್ಬ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ ಶಿಶಿಲ್, ಯಕ್ಷಗಾನ ಮತ್ತು ರಂಗಭೂಮಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು, ಅವರ ಪ್ರತಿಭೆ ಮತ್ತು ಉತ್ಸಾಹಕ್ಕೆ ಮೆಚ್ಚುಗೆ ಗಳಿಸಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಪ್ರಧಾನಿಯವರ ಪೋಸ್ಟ್‌ಗೆ ನಿರ್ಬಂಧ ವಿವಾದ – ಫೇಸ್‌ಬುಕ್ ವಿರುದ್ಧ ಬಿಜೆಪಿ ಆಕ್ರೋಶ !

⚠️ Contents are protected on this website.