ಬೆಳ್ತಂಗಡಿ : ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಬೆಳ್ತಂಗಡಿ, ಆ. 02 : ತಾಲೂಕಿನ ರೆಖ್ಯಾ ಗ್ರಾಮದ ಕೃಷಿ ಕಾರ್ಮಿಕರಾದ ಶ್ರೀ ಬಾಲಕೃಷ್ಣ ಗೌಡ ಅವರು ಆ. 01ರಂದು ರಾತ್ರಿ ನಡೆದ ಕಾಡಾನೆ ದಾಳಿಯಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ, ಶಾಸಕ  ಹರೀಶ್ ಪೂಂಜ ಅವರು ಇಂದು ಅವರ ನಿವಾಸಕ್ಕೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಒಟ್ಟು ರೂ.20 ಲಕ್ಷ ಪರಿಹಾರವನ್ನು ಮಂಜೂರು ಮಾಡುವ ಕುರಿತು ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸ್ಥಳದಲ್ಲೇ ಚರ್ಚಿಸಿ, ಪ್ರಥಮ ಹಂತವಾಗಿ ರೂ.5 ಲಕ್ಷ ಪರಿಹಾರ ಧನದ ಚೆಕ್ ಅನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಲಾಯಿತು. ಉಳಿದ ರೂ.15 ಲಕ್ಷ ಪರಿಹಾರವನ್ನು ನೇರವಾಗಿ ಮೃತರ ವಾರೀಸುದಾರರ ಬ್ಯಾಂಕ್ ಖಾತೆಗೆ ಜಮಾ ಮಾಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಶಾಸಕ ಶ್ರೀ ಹರೀಶ್ ಪೂಂಜ ಅವರು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ (DFO) ರವಿಶಂಕರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ACF) ಸುಬ್ಬಯ್ಯ ನಾಯ್ಕ, ವಲಯ ಅರಣ್ಯಾಧಿಕಾರಿ (RFO), ತಹಶೀಲ್ದಾರ್ ಎಸ್.ಎನ್. ನರಗುಂದ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ಮೃತ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಅಗತ್ಯವಿರುವ ಎಲ್ಲಾ ಸರ್ಕಾರಿ ನೆರವು ಮತ್ತು ಸೌಲಭ್ಯಗಳನ್ನು ತ್ವರಿತವಾಗಿ ಒದಗಿಸುವಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಶ್ರೀ ಹರೀಶ್ ಪೂಂಜ ಅವರು ನಿರ್ದೇಶನ ನೀಡಿದರು.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಉಜಿರೆ ಎಸ್‌ಡಿಎಂಐಟಿಯಲ್ಲಿ ಅ. 29ರಿಂದ ‘ಸ್ಪರ್ಧಂ-2026’ ಅಂತರಕಾಲೇಜು ಸ್ಪರ್ಧೋತ್ಸವ – ಅ. 30ರಂದು ಸ್ಟಾರ್ ನೈಟ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮುಂಬೈ : ನೆಪಕ್ಕೆ ರ‍್ಯಾಪಿಡೋ ರೈಡರ್ : ಪ್ರಧಾನಿ ಮೋದಿ ಹತ್ಯೆಗೆ ಜೈಶ್ ಉಗ್ರರೊಂದಿಗೆ ಸಂಚು ರೂಪಿಸುತ್ತಿದ್ದ ಅಖ್ತರ್ ಎಂಬಾತ ಎಟಿಎಸ್ ಬಲೆಗೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಕನ್ಯಾಡಿ : ಅಯೋಧ್ಯೆಯ ಕನ್ಯಾಡಿ ಶ್ರೀರಾಮ ಮಠದ ಯೋಜನೆಗೆ ಮಸ್ಕತ್‌ನ ಶ್ರೀರಾಮ ಭಕ್ತರಿಂದ ₹10 ಲಕ್ಷಕ್ಕೂ ಅಧಿಕ ದೇಣಿಗೆ