ಕಲ್ಲೇರಿ : 15 ದಿನಗಳ ಉಚಿತ ಆರಿ ಕೌಶಲ್ಯ ತರಬೇತಿ ಸಮಾರೋಪ ಸಮಾರಂಭ

ಕಲ್ಲೇರಿ, ಜೂ. 17 : ಬ್ಯಾಂಕ್ ಆಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಹಾಗೂ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ನಡೆದ 15 ದಿನಗಳ ಆರಿ ಕೌಶಲ್ಯ ತರಬೇತಿಯ ಸಮಾರೋಪ ಸಮಾರಂಭ ತಣ್ಣೀರುಪಂಥ ಹಾಲು ಉತ್ಪಾದಕರ ಸಂಘದ ಸಭಾಂಗಣ ಕಲ್ಲೇರಿಯಲ್ಲಿ ನಡೆಯಿತು.

Advertisement

ಈ ಸಂದರ್ಭದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇದರ ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀ ಜೀವನ್ ಕೊಲ್ಯ ಮಾತನಾಡುತ್ತಾ, ” ಮಹಿಳೆಯರು ಕಾಲಕ್ಕೆ ತಕ್ಕಂತ ಬೇಡಿಕೆಗೆ ಅನುಗುಣವಾಗಿ ಕೌಶಲ್ಯ ತರಬೇತಿ ಕಲಿತು ಸ್ವ ಉದ್ಯೋಗ ಮಾಡಬೇಕು. ಬೇಡಿಕೆ ಇರುವಾಗ ಮನೆಯಲ್ಲಿ ಉದ್ಯೋಗ ಮಾಡಿ ಉತ್ತಮ ಆದಾಯ ಗಳಿಸಲು ಸಾಧ್ಯವಿದೆ” ಎಂದರು.

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ಇದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾದ ಶ್ರೀ ಜ್ಯೋತಿ ರಾಜ್ ಇವರು ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರ ಕೌಶಲ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಮಹಿಳೆಯರ ಸ್ವ ಉದ್ಯೋಗ ಮಾಡಲು ನಮ್ಮ ಸಂಸ್ಥೆ ಸದಾ ನೆರವು ನೀಡಲಿದೆ ಎಂದರು.

ಬೆಳ್ತಂಗಡಿ ತಾಲೂಕು ಅಮೂಲ್ಯ ಸಾಕ್ಷರತಾ ಸಮಾಲೋಚಕರಾದ ಶ್ರೀಮತಿ ಉಷಾ ಕಾಮತ್ ತರಬೇತಿಯ ನಂತರದ ಅವಕಾಶಗಳ ಬಗ್ಗೆ , ಬ್ಯಾಂಕ್ ನಿಂದ ಸಿಗುವ ಬ್ಯಾಂಕ್ ಸಾಲ ಸೌಲಭ್ಯ ಬಗ್ಗೆ ವಿವರಿಸಿದರು. ತರಬೇತಿಯ ಸಂಪನ್ಮೂಲ ವ್ಯಕ್ತಿಗಳಾದ ಶ್ರೀಮತಿ ದೀಕ್ಷಾ ಇವರು ತರಬೇತಿ ನೀಡಿದ ಅನುಭವ ಹಂಚಿಕೊಂಡರು. ಹೊಲಿಗೆ ತರಬೇತಿ ಕೇಂದ್ರದ ಶಿಕ್ಷಕಿ ಶ್ರೀಮತಿ ಮೀನಾಕ್ಷಿ, ತರಬೇತುದಾರರಾದ ಶ್ರೀಮತಿ ಅಕ್ಷಿತಾ, ತಣ್ಣೀರುಪಂಥ ಹಾಲು ಸೊಸೈಟಿ ಕಾರ್ಯದರ್ಶಿ ಶ್ರೀ ಜಯರಾಜ್ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತರಬೇತಿಯಲ್ಲಿ ಭಾಗವಹಿಸಿದ ಮಹಿಳೆಯರು ತರಬೇತಿ ಬಗ್ಗೆ ತಮ್ಮ ಅನಿಸಿಕೆ ವ್ಯಕ್ತಪಡಿಸಿದರು. ಯಶಸ್ವಿಯಾಗಿ ತರಬೇತಿ ಪೂರೈಸಿದ ಮಹಿಳೆಯರಿಗೆ ಪ್ರಮಾಣಪತ್ರ ವಿತರಿಸಲಾಯಿತು .ಶ್ರೀಮತಿ ಗುಣವತಿ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಮಲ್ಲಿಕಾ ಸ್ವಾಗತಿಸಿ, ಶ್ರೀಮತಿ ವಿನೋದಾ ವಂದಿಸಿದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.