ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಾಧ್ಯಾಪಕ ಬಂಧನ – ಸೇವೆಯಿಂದ ವಜಾಗೊಳಿಸಿದ ಕಾಲೇಜು ಆಡಳಿತ ಮಂಡಳಿ

ಬೆಂಗಳೂರು, ಮಾ. 27 : ನಗರದ ಹೊರವಲಯದಲ್ಲಿರುವ ಶ್ರೀ ಸಿದ್ಧಾರ್ಥ ವೈದ್ಯಕೀಯ ವಿಜ್ಞಾನ ಸಂಸ್ಥೆ ಮತ್ತು ಸಂಶೋಧನಾ ಕೇಂದ್ರ ಕಾಲೇಜಿನಲ್ಲಿ ತರಗತಿಯ ವೇಳೆ ಪ್ರಾಧ್ಯಾಪಕರೊಬ್ಬರು ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಆರೋಪಿ ಪ್ರಾಧ್ಯಾಪಕನನ್ನು ಬಂಧಿಸಿ ಸೇವೆಯಿಂದ ವಜಾಗೊಳಿಸಲಾಗಿದೆ.

Advertisement

ಈ ಘಟನೆ ಮಾರ್ಚ್ 23ರಂದು ನಡೆದಿದ್ದು, ಡಾ. ಅಬ್ದುಲ್ ರೆಹಮಾನ್ ಷರೀಫ್ ಎಂಬ ಪ್ರಾಧ್ಯಾಪಕರು ತರಗತಿಯಲ್ಲೇ ವಿದ್ಯಾರ್ಥಿನಿಯೊಬ್ಬಳು ತನ್ನ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸಿದ್ದಾಳೆ ಎಂದು ಹೇಳಿಕೊಂಡು, ಅದಕ್ಕೆ ಪ್ರತಿಯಾಗಿ “ನಾನು ನಿನ್ನನ್ನು ಪ್ರೀತಿಸುತ್ತೇನೆ” ಎಂದು ಹೇಳಿರುವ ವೀಡಿಯೋ ವೈರಲ್ ಆಗಿತ್ತು.

ಆದರೆ, ಸಂಬಂಧಿತ ವಿದ್ಯಾರ್ಥಿನಿ ತಕ್ಷಣವೇ ಈ ಹೇಳಿಕೆಯನ್ನು ಖಂಡಿಸಿ, ವಿಷಯವನ್ನು ಕಾಲೇಜು ಪ್ರಾಂಶುಪಾಲರ ಗಮನಕ್ಕೆ ತರುವಂತೆ ಕೇಳಿಕೊಂಡಿದ್ದಾಳೆ. ಆರೋಪಿ ಪ್ರಾಧ್ಯಾಪಕ ಅಬ್ದುಲ್ ತಮ್ಮ ಹೇಳಿಕೆಗೆ ಸಿಸಿಟಿವಿ ಪುರಾವೆಗಳಿವೆ ಎಂದು ಒತ್ತಾಯಿಸಿದಾಗ, ವಿದ್ಯಾರ್ಥಿನಿ ಅದನ್ನು ತೋರಿಸಲು ಸವಾಲು ಹಾಕಿದ್ದಾಳೆ. ಇದರಿಂದ ಮಾತಿನ ಚಕಮಕಿ ಉಂಟಾಗಿ, ಪ್ರಾಧ್ಯಾಪಕ ತರಗತಿಯಿಂದ ಹೊರನಡೆದಿದ್ದಾರೆ. ತರಗತಿಯಲ್ಲೇ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ, ಆಕ್ರೋಶಗೊಂಡ ವಿದ್ಯಾರ್ಥಿಗಳು ಆರೋಪಿ ಪ್ರಾದ್ಯಾಪಕನಿಗೆ ಧರ್ಮದೇಟು ನೀಡಿದ್ದಾರೆ. ಕ್ಯಾಂಪಸ್ ನಲ್ಲಿ ವಿದ್ಯಾರ್ಥಿಗಳ ತಂಡ ಯದ್ವಾತದ್ವಾ ಬಾರಿಸಿದ್ದಾರೆ, ಬಳಿಕ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳನ್ನು ತಡೆದು, ಪರಿಸ್ಥಿತಿ ತಿಳಿಗೊಳಿಸಿದ್ದರು.

ಕಾಲೇಜು ಪ್ರಾಂಶುಪಾಲ ಡಾ. ದಿವಾಕರ್ ಎಸ್.ವಿ. ನೀಡಿದ ದೂರಿನ ಮೇರೆಗೆ, ಮಹಿಳಾ ವಿದ್ಯಾರ್ಥಿಗಳು ಪ್ರಾಧ್ಯಾಪಕರ ವಿರುದ್ಧ ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆ ಆರೋಪಗಳನ್ನು ಮಾಡಿದ್ದಾರೆ. ತನಿಖೆ ನಡೆಯುವವರೆಗೆ ಕ್ಯಾಂಪಸ್‌ಗೆ ಪ್ರವೇಶಿಸದಂತೆ ಸೂಚನೆ ನೀಡಿದ್ದರೂ, ಅವರು ಮತ್ತೆ ಕಾಲೇಜಿಗೆ ಬಂದು ವಿದ್ಯಾರ್ಥಿನಿಯ ಕೈ ಹಿಡಿದಿರುವುದಾಗಿ ಆರೋಪಿಸಲಾಗಿದೆ.

ಈ ಹಿನ್ನೆಲೆಯಲ್ಲಿ ನೆಲಮಂಗಲ ಗ್ರಾಮೀಣ ಪೊಲೀಸರು ಪ್ರಾಧ್ಯಾಪಕರ ವಿರುದ್ಧ ಪ್ರಕರಣ ದಾಖಲಿಸಿದ್ದು, ಮಹಿಳೆಯ ಘನತೆಗೆ ಧಕ್ಕೆ, ಅನಪೇಕ್ಷಿತ ಲೈಂಗಿಕ ವರ್ತನೆ ಹಾಗೂ ಕ್ರಿಮಿನಲ್ ಅತಿಕ್ರಮಣ ಸೇರಿದಂತೆ ಹಲವು ಆರೋಪಗಳಡಿ ತನಿಖೆ ಮುಂದುವರಿಸಿದ್ದಾರೆ. ಇದೇ ವೇಳೆ, ಕಾಲೇಜು ಆಡಳಿತ ಮಂಡಳಿ ತಕ್ಷಣ ಕ್ರಮ ಕೈಗೊಂಡು ಪ್ರಾಧ್ಯಾಪಕರನ್ನು ಸೇವೆಯಿಂದ ವಜಾಗೊಳಿಸಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.