ಮೂಡುಬಿದಿರೆ: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಚಿಕಿತ್ಸೆ ಫಲಿಸದೆ ಸಾವು

Advertisement

ಮೂಡುಬಿದಿರೆ, ಮಾ. 23 : ಕಳೆದ 2025ರ ಅಕ್ಟೋಬರ್‌ನಲ್ಲಿ ಕಾರ್ಕಳದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Advertisement

ಮೂಡುಬಿದಿರೆ ತಾಲೂಕಿನ ಪಡುಮಾರ್ನಾಡು ನಿವಾಸಿಗಳಾದ ಶ್ಯಾಮ್ ಅಂಚನ್ ಮತ್ತು ಜಯಂತಿ ಕುಲಾಲ್ ದಂಪತಿಯ ಪುತ್ರ ಸಾತ್ವಿಕ್ ಕುಲಾಲ್ (21) ಮೃತ ದುರ್ದೈವಿ.

Advertisement

ಸಾತ್ವಿಕ್ ಅಂತಿಮ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದರು. ಅಕ್ಟೋಬರ್‌ನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದ ನಂತರ, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ತೀವ್ರ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಹಲವು ತಿಂಗಳುಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಅವರು, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ