ಕಾರ್ಕಳ : ಮನೆಯೊಂದರಿಂದ ಹಿಡಿದ ಹಾವನ್ನು ಕಾಡಿಗೆ ಬಿಡಲು ತೆರಳುವಾಗ ಅಪಘಾತ – ಸ್ಕೂಟರ್ ಸವಾರ ಸಾವು

Advertisement

ಕಾರ್ಕಳ, ಮಾ. 24 : ಟಿಪ್ಪರ್ ಮತ್ತು ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಸಹಸವಾರ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಮಾಳ ಮುಳ್ಳೂರು ಬಳಿ ನಡೆದಿದೆ.

Advertisement

ಬಜಗೋಳಿ ಡಿಡಿಂಬಿರಿ ನಿವಾಸಿ ನವೀನ್ ಮೃತರು ಎಂದು ಗುರುತಿಸಲಾಗಿದೆ. ಮೃತ ನವೀನ ರವರು ವೆಲ್ಡಿಂಗ್ ವೃತ್ತಿಯನ್ನು ಮಾಡುತ್ತಿದ್ದು, ಹಾವು ಹಿಡಿಯುವ ಹವ್ಯಾಸ ಹೊಂದಿದ್ದರು. ನಿನ್ನೆ ಹಿಡಿದ ಎರಡು ಹಾವುಗಳನ್ನು ಹಿಡಿದುಕೊಂಡು ಕಾಡಿಗೆ ಬಿಡಲು ತೆರಳಿದ್ದರು. ಈ ಸಂದರ್ಭ ಈ ದುರ್ಘಟನೆ ನಡೆದಿದೆ.

Advertisement

ನವೀನರವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ತಂಡ, ಬಜಗೋಳಿ ಸ್ವಚ್ಛ ಬ್ರಿಗೇಡ್ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದು, ಹಲವು ಸಮಾಜಮುಖಿ ಕಾರ್ಯಗಳಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದರು.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ