ನೆಲ್ಯಾಡಿ : ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಸಾವು – ಮಹಿಳೆ ಗಂಭೀರ

Advertisement

ನೆಲ್ಯಾಡಿ, ಏ. 29 : ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕಿನಲ್ಲಿ ಇದ್ದ ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.

Advertisement


ಮಾಹಿತಿ ಪ್ರಕಾರ ಸಂಚರಿಸುತ್ತಿದ್ದ ಸ್ಕೂಟಿ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಸ್ಕೂಟಿ ಸವಾರ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಗಾಯಗೊಂಡ ಮಹಿಳೆಯನ್ನು ತಕ್ಷಣ ಸಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೊಂಡೊಯ್ಯಲಾಗಿದೆ ಖಾಸಗಿ ಆಸ್ಪತ್ರೆಗೆ ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರ ಹಾಗೂ ಗಾಯಾಳುವಿನ ಗುರುತು ಇನ್ನಷ್ಟೇ ತಿಳಿದುಬರಬೇಕಿದೆ. ಅಪಘಾತದ ನಿಖರ ಕಾರಣಗಳ ಕುರಿತು ತನಿಖೆ ಮುಂದುವರೆದಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ