ಆಟೋರಿಕ್ಷಾಕ್ಕೆ ಕಾರು ಢಿಕ್ಕಿ, ಟಿಪ್ಪರ್ ನಡಿಗೆ ಬಿದ್ದು ಆಟೋ ಚಾಲಕ ದುರ್ಮರಣ

Advertisement

ಸುಳ್ಯ, ಜ. 30 : ಆಟೋರಿಕ್ಷಾವೊಂದಕ್ಕೆ ಹಿಂದಿನಿಂದ ಕಾರು ಡಿಕ್ಕಿಯಾಗಿ ರಸ್ತೆಗೆ ಬಿದ್ದ ಅಟೋ ರಿಕ್ಷಾದ ಚಾಲಕ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟಿಪ್ಪ‌ರ್ ವಾಹನದ ಅಡಿಗೆ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಣಿ – ಮೈಸೂರು ಹೆದ್ದಾರಿಯ ಕೊಡಗು ಸಂಪಾಜೆ ಗೇಟ್ ಬಳಿ ಸಂಭವಿಸಿದೆ. ಸುಂದರ ಚಿಟ್ಟಿಕಾನ (56) ಮೃತ ಅಟೋರಿಕ್ಷಾ ಚಾಲಕ.

Advertisement

ಅಟೋರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು ಕೊಡಗು- ಸಂಪಾಜೆ ಪೆಟ್ರೋಲ್ ಪಂಪ್ ಬಳಿಯ ತಿರುವಿನಲ್ಲಿ ಹಿಂದಿನಿಂದ ಬಂದ ಕಾರು ಅಟೋರಿಕ್ಷಾಕ್ಕೆ ಗುದ್ದಿ ಪರಾರಿಯಾಗಿದೆ. ಈ ವೇಳೆ ಅಟೋ ಚಾಲಕ ರಸ್ತೆಗೆ ಬಿದ್ದಿದ್ದು, ಎದುರಿನಿಂದ ಬರುತ್ತಿದ್ದ ಟಿಪ್ಪರ್ ಲಾರಿ ಅಡಿಗೆ ರಿಕ್ಷಾ ಚಾಲಕ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Advertisement

ಅಟೋ ರಿಕ್ಷಾದಲ್ಲಿದ್ದ ಇನ್ನೋರ್ವ ಪ್ರಯಾಣಿಕನಿಗೂ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಅಪಘಾತ ಎಸಗಿದ ಕಾರು ನಿಲ್ಲಿಸದೇ ಅಲ್ಲಿಂದ ತೆರಳಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ