ಮೈಸೂರು ದಸರಾ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಬೈಕ್ ಅಪಘಾತ – ಕಳೆಂಜದ ಯುವಕ ಸಾವು, ಕೊಯ್ಯೂರಿನ ಯುವಕನಿಗೆ ಗಾಯ

ಬೆಳ್ತಂಗಡಿ, ಅ. 19 : ಮೈಸೂರು ದಸರಾ ವೀಕ್ಷಿಸಿ ಬೆಂಗಳೂರಿಗೆ ವಾಪಸಾಗುತ್ತಿದ್ದ ವೇಳೆ ಬೈಕ್ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಅಪಘಾತದಲ್ಲಿ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕೊಳಂಬೆಯ ಯುವಕ ಮೃತಪಟ್ಟ ಘಟನೆ ಅ. 18ರಂದು ಮಧ್ಯರಾತ್ರಿ ನಡೆದಿದೆ.

ಕೊಳಂಬೆ ನಿವಾಸಿ ಶಾಂತಪ್ಪ ಗೌಡ ಮತ್ತು ಲೀಲಾ ದಂಪತಿಯ ಪುತ್ರ ಮನೋಹರ (23) ಮೃತ ಯುವಕ. ಸಹಸವಾರರಾಗಿದ್ದ ಕೊಯ್ಯರಿನ ಬಿರ್ಕೆ ನಿವಾಸಿ ದೀಕ್ಷಿತ್ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ಮನೋಹರ ಹಾಗೂ ದೀಕ್ಷಿತ್ ಅ. 18ರಂದು ಮೈಸೂರು ದಸರಾ ವೀಕ್ಷಿಸಲು ಬೈಕ್‌ನಲ್ಲಿ ತೆರಳಿದ್ದರು. ರಾತ್ರಿ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಸಿದ್ದಾರ್ಥನಗರ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಟ್ರಾಫಿಕ್ ಸಿಗ್ನಲ್ ನಲ್ಲಿ ಬೈಕ್‌’ಗೆ ಸ್ಕೂಟಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅಪಘಾತದಲ್ಲಿ ಮನೋಹರ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಮನೋಹರ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ದೀಕ್ಷಿತ್ ಗಾಯಗೊಂಡಿದ್ದಾರೆ.

ಮೃತದೇಹವನ್ನು ಖಾಸಗಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.ಮೃತರು ತಂದೆ ಶಾಂತಪ್ಪ ಗೌಡ, ತಾಯಿ ಲೀಲಾ ಹಾಗೂ ಸಹೋದರ ವಿಕ್ರಮ್ ಅವರನ್ನು ಅಗಲಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ವಿದೇಶ

ಜಪನ್ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ – ಪ್ಯಾರಾ ಈಜುಪಟು ಮೊಹಮ್ಮದ್ ಶಮ್ಸ್ ಜಪಾನ್‌ನಿಂದ ಗಡಿಪಾರು, ತಂಡಕ್ಕೆ ಮುಜುಗರ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಳಗಾವಿ : ಮನೆಯಲ್ಲಿ ವಿಜಯದಶಮಿ ಹಬ್ಬದ ಸಂಭ್ರಮದ ರಾತ್ರಿಯಂದು ಹರಿದಿತ್ತು ರಕ್ತ – ಹಬ್ಬದ ದಿನವೇ ಹೆಂಡತಿಗೆ ಚಟ್ಟ ಕಟ್ಟಿದ ಪತಿ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ನಾವೂರು ಕ್ಲಿನಿಕ್ ಗೆ ಬೆಂಕಿ ಪ್ರಕರಣದಲ್ಲಿ ಪ್ರಭಾವಿ ವ್ಯಕ್ತಿಗಳಿರುವ ಶಂಕೆಯಿದೆ – ಗ್ರಾಮಸ್ಥರು