ಪುತ್ತೂರು : ಮನೆಗೆ ಬಿಡುವ ನೆಪದಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ – ಅದ್ದು ಪಡೀಲ್ ವಿರುದ್ಧ ಪೋಕ್ಸೋ ಕೇಸ್ !!

Advertisement

ಪುತ್ತೂರು, ಆ. 25 : ಕಾರ್ಯಕ್ರಮವೊಂದರಿಂದ ಬಾಲಕಿಯನ್ನು ಮನೆಗೆ ಬಿಡುವ ನೆಪದಲ್ಲಿ ದ್ವಿಚಕ್ರ ವಾಹನದಲ್ಲಿ ಕರೆತರುತ್ತಿದ್ದ ವೇಳೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಮೇಲೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಆರೋಪಿಯನ್ನು ಅದ್ದು ಪಡೀಲ್ ಎಂದು ಗುರುತಿಸಲಾಗಿದೆ. ಆ.23ರ ರಾತ್ರಿ ಕಾರ್ಯಕ್ರಮ ಮುಗಿದ ಬಳಿಕ ಬಾಲಕಿಯನ್ನು ಮನೆಗೆ ಬಿಡುವ ಸಲುವಾಗಿ ಆರೋಪಿ ತನ್ನ ದ್ವಿಚಕ್ರ ವಾಹನದಲ್ಲಿ ಕರೆದುಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಬಾಲಕಿಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.

Advertisement

ದೂರಿನ ಆಧಾರದ ಮೇಲೆ ದಕ್ಷಿಣ ಕನ್ನಡ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೋಕ್ಸ್‌ ಕಾಯ್ದೆಯ ಕಲಂ 8 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮುಂದುವರೆದಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ