ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ಚೆನ್ನೈ, ಫೆ. 24 : ತಮಿಳುನಾಡು ವಿಧಾನಸಭಾ ಚುನಾವಣೆಯ ಕಾವು ಏರುತ್ತಿರುವ ಬೆನ್ನಲ್ಲೇ, ಎಐಎಡಿಎಂಕೆ (AIADMK) ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ಮಂಗಳವಾರ ತಮ್ಮ ಪಕ್ಷದ ಚುನಾವಣಾ ಭರವಸೆಗಳ ಮೂರನೇ ಹಂತದ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಜೊತೆಗೆ ಡಿಎಂಕೆ ಆಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರನ್ನು ಸೆಳೆಯಲು ‘ಬಂಪರ್’ ಕೊಡುಗೆಗಳನ್ನು ಘೋಷಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪಳನಿಸ್ವಾಮಿ, ಕಳೆದ ಐದು ವರ್ಷಗಳ ಡಿಎಂಕೆ ಆಡಳಿತದಲ್ಲಿ ಆಸ್ತಿ ತೆರಿಗೆ, ಮನೆ ತೆರಿಗೆ, ವಿದ್ಯುತ್ ದರ ಮತ್ತು ನೀರಿನ ತೆರಿಗೆಗಳನ್ನು ವಿಪರೀತವಾಗಿ ಏರಿಸಲಾಗಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಭಾರಿ ಆರ್ಥಿಕ ಹೊರೆ ಬಿದ್ದಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯದ ಆದಾಯ ಹೆಚ್ಚಿಸಿ, ಈ ಎಲ್ಲಾ ಯೋಜನೆಗಳನ್ನು ಜಾರಿಗೆ ತರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ಜನ್ಮದಿನದ ಅಂಗವಾಗಿ ಈ ಘೋಷಣೆಗಳನ್ನು ಮಾಡಲಾಗಿದ್ದು, ಜನಸಾಮಾನ್ಯರು, ನಿರುದ್ಯೋಗಿಗಳು ಮತ್ತು ನೇಕಾರರನ್ನು ಗುರಿಯಾಗಿಸಿಕೊಂಡು ಹಲವು ಜನಪ್ರಿಯ ಯೋಜನೆಗಳನ್ನು ಪ್ರಕಟಿಸಲಾಗಿದೆ.

ಪ್ರಮುಖ ಘೋಷಣೆಗಳು :

ಕುಟುಂಬಕ್ಕೆ 10,000 ರೂ. ಪರಿಹಾರ: ಡಿಎಂಕೆ ಆಡಳಿತದಲ್ಲಿನ ಬೆಲೆ ಏರಿಕೆಯ ಹೊರೆ ತಗ್ಗಿಸಲು ಎಐಎಡಿಎಂಕೆ ಅಧಿಕಾರಕ್ಕೆ ಬಂದ ಕೂಡಲೇ ಪ್ರತಿ ಕುಟುಂಬಕ್ಕೆ ಒಂದು ಬಾರಿಯ ಎಕ್ಸ್‌ಗ್ರೇಷಿಯಾ ರೂಪದಲ್ಲಿ 10,000 ರೂ. ಧನಸಹಾಯ.
ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ: ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೋಂದಾಯಿಸಿಕೊಂಡು ಕೆಲಸಕ್ಕಾಗಿ ಕಾಯುತ್ತಿರುವ ಪದವೀಧರರಿಗೆ ಮಾಸಿಕ 2,000 ರೂ. ಹಾಗೂ ಪಿಯುಸಿ ಪೂರೈಸಿದವರಿಗೆ ಮಾಸಿಕ1,000 ರೂ.ಸ್ಟೈಫಂಡ್.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

ರಾಜ್ಯ / ದೇಶ

ಫೆ.26ಕ್ಕೆ ಕೆನಡಾದ ಪ್ರಧಾನಿ ಮಾರ್ಕ್ ಕಾರ್ನಿ ಭಾರತಕ್ಕೆ ಭೇಟಿ

⚠️ Contents are protected on this website.