ನ್ಯೂಯಾರ್ಕ್ :‌ ತುರ್ತು ಭೂಸ್ಪರ್ಶದ ವೇಳೆ ಅಗ್ನಿಶಾಮಕ ಟ್ರಕ್‌ಗೆ ಡಿಕ್ಕಿ ಹೊಡೆದ ವಿಮಾನ

ನ್ಯೂಯಾರ್ಕ್, ಮಾ. 23 :‌ ಕೆನಡಾದ ಮಾಂಟ್ರಿಯಲ್‌ನಿಂದ ಬರುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶದ ವೇಳೆ ಟ್ಯಾಕ್ಸಿವೇಯಲ್ಲಿ ಅಗ್ನಿಶಾಮಕ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಡಿಕ್ಕಿ ಹೊಡೆದ ಪರಿಣಾಮ ಹಲವಾರು ಜನರು ಗಾಯಗೊಂಡಿರಬಹುದು ಎಂದು ಫ್ಲೈಟ್-ಟ್ರ್ಯಾಕಿಂಗ್ ವೆಬ್‌ಸೈಟ್ ಫ್ಲೈಟ್‌ರಾಡರ್ 24 ವರದಿ ಮಾಡಿದೆ.

Advertisement

ನ್ಯೂಯಾರ್ಕ್‌ ಲಾಗಾರ್ಡಿಯಾ ವಿಮಾನ ನಿಲ್ದಾಣದ ರನ್‌ವೇ 4 ರಲ್ಲಿ ಆಗಮಿಸುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ನ CRJ -900 ವಿಮಾನ ಮತ್ತು ಅಗ್ನಿಶಾಮಕ ಎಂಜಿನ್ ಡಿಕ್ಕಿಹೊಡೆದಿದ್ದು, ಇದಾದ ಬಳಿಕ ಅಲ್ಲಿ ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವ ರಕ್ಷಣಾ ಕಾರ್ಯಚರಣೆ ಹಾಗೂ ಜನರನ್ನು ಸ್ಥಳಾಂತರಿಸುವ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್‌ ಆಗಿವೆ. ಈ ವಿಡಿಯೋಗಳಲ್ಲಿ ಪ್ರಯಾಣಿಕರ ವಿಮಾನದ ಮುಂಭಾಗವು ಜಖಂಗೊಂಡಿದೆ.

ಎಮರ್ಜೆನ್ಸಿ ಲ್ಯಾಂಡಿಗ್‌ ನಿಂದ ಸಂಭವಿಸಿದ ಅವಘಢ

ಈ ಘಟನೆಯು ಸ್ಥಳೀಯ ಸಮಯ ರಾತ್ರಿ 11:38 ಕ್ಕೆ ನಡೆದಿದ್ದು, ಟ್ರಕ್ ಅಗ್ನಿಶಾಮಕ ದಳದ ವಾಹನವಾಗಿದ್ದು, ಯುನೈಟೆಡ್ ಏರ್‌ಲೈನ್ಸ್ ವಿಮಾನವನ್ನು ತಲುಪಲು ರನ್‌ವೇ ದಾಟಲು ಪ್ರಯತ್ನಿಸುತ್ತಿತ್ತು. ಈ ವೇಳೆ, ವಿಮಾನ ತುರ್ತುಪರಿಸ್ಥಿತಿಯನ್ನು ಘೋಷಿಸಿದ್ದು, ಅಗ್ನಿಶಾಮಕ ವಾಹವನ್ನು ಅಲ್ಲಿಂದ ತೆರವುಗೊಳಿಸುವಂತೆ ಕೋರಿದೆ. ಆದಾಗ್ಯೂ, ಎಮರ್ಜೆನ್ಸಿ ಲ್ಯಾಂಡಿಗ್‌ ವೇಳೆ, ಈ ಅವಘಡ ಸಂಭವಿಸಿದೆ ಎಂದು ವರದಿಯಾಗುತ್ತಿದೆ.

ಈ ವಿಮಾನದಲ್ಲಿ 80ಮಂದಿ ಪ್ರಯಾಣಿಕರು ಸೇರಿದಂತೆ ಸಿಬ್ಬಂದಿಗಳು ಇದ್ದರು. ಘಟನೆಯಲ್ಲಿ 4 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಅಗ್ನಿಶಾಮಕ ದಳದ ಸಿಬ್ಬಂದಿ ಪ್ರಾಧಿಕಾರದ ಪೊಲೀಸ್ ಇಲಾಖೆಯವರು ಎಂದು ತಿಳಿದು ಬಂದಿದೆ. ಇದರಲ್ಲಿ ವಿಮಾನದ ಪೈಲಟ್ ಮತ್ತು ಸಹ ಪೈಲಟ್ ಕೂಡ ತೀವ್ರವಾಗಿ ಗಾಯಗೊಂಡಿದ್ದಾರೆ, ಅಗ್ನಿಶಾಮಕ ವಾಹನದಲ್ಲಿದ್ದ ಒಬ್ಬ ಸಾರ್ಜೆಂಟ್ ಮತ್ತು ಅಧಿಕಾರಿ ಕೂಡ ಕೈಕಾಲುಗಳಿಗೆ ಪೆಟ್ಟಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಈ ಬೆನ್ನಲ್ಲೇ, ಈ ಕುರಿತು ಮಾಹಿತಿ ನೀಡಿರುವ ಅಮೆರಿಕಾದ ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್(FAA) ಅಪಘಾತ ತುರ್ತು ಪರಿಸ್ಥಿತಿಯಿಂದಾಗಿ ಘಟನೆ ನಡೆದಿದೆ ಎಂದು ತಿಳಿಸಿದೆ. ಅಲ್ಲದೆ, ನ್ಯೂಯಾರ್ಕ್‌ ನ ಪ್ರಮುಖ ಸಾರಿಗೆ ಕೇಂದ್ರವಾಗಿರುವ ಈ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ : ಕೃಷಿಕ ಕೃಷ್ಣಪ್ಪ ಕುಲಾಲ್ ಅಂತ್ಯಕ್ರಿಯೆಯಲ್ಲಿ ಪರಿಸರ ಕಾಳಜಿ – ಮೃತ ಪ್ರಕೃತಿ ಪ್ರೀತಿ ಜೀವಂತವಾಗಿರಿಸಲು ಗಿಡ ವಿತರಣೆ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಪ್ರಧಾನಿಯವರ ಪೋಸ್ಟ್‌ಗೆ ನಿರ್ಬಂಧ ವಿವಾದ – ಫೇಸ್‌ಬುಕ್ ವಿರುದ್ಧ ಬಿಜೆಪಿ ಆಕ್ರೋಶ !

⚠️ Contents are protected on this website.