ಚಿಕ್ಕಮಗಳೂರು : ಕಾಫಿ ಎಸ್ಟೇಟ್ ನಲ್ಲಿ ಕದ್ದ ದನಗಳ ಅಕ್ರಮ ವಧೆ – ಬಂಧಿತರು ಅಕ್ರಮ ಬಾಂಗ್ಲಾ ವಲಸಿಗರೆಂದು ಶಂಕಿಸಿದ ಸ್ಥಳೀಯರು !

ಚಿಕ್ಕಮಗಳೂರು, ಡಿ. 08 : ದನಗಳನ್ನು ಕದ್ದು, ಅಕ್ರಮವಾಗಿ ಮಾಂಸ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಕೊಪ್ಪ ತಾಲೂಕಿನ ಜಯಪುರ ಸಮೀಪದ ಹೇರೂರು ಕಾಫಿ ಎಸ್ಟೇಟ್‌ನಲ್ಲಿ ನಡೆದಿದೆ. ಅಸ್ಸಾಂನಿಂದ ಕೂಲಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರು ಎರಡು ದನಗಳನ್ನು ಕದ್ದು ಕಾಫಿ ತೋಟದಲ್ಲಿ ಹತ್ಯೆ ಮಾಡಿ, ಮಾಂಸ ಹಂಚಿಕೆ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆನ್ನಲಾಗಿದೆ.

Advertisement

ಪಿ.ಎಸ್.ಐ. ರವೀಶ್ ನೇತೃತ್ವದಲ್ಲಿ ದಾಳಿ ನಡೆಸಿದ ಬಾಳೆಹೊನ್ನೂರು ಪೊಲೀಸರು, ಆರೋಪಿಗಳಾದ ಅನ್ಸರ್, ಮಜೀದ್, ಮತ್ತು ಮುಜಾಮಿಲ್ ಎಂಬುವವರನ್ನು ಬಂಧಿಸಿ, ಗೋಮಾಂಸ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ. ಇನ್ನು, ಇಲ್ಲಿ ಬಂಧಿತರಾಗಿರುವ ಆರೋಪಿಗಳು ಅಸ್ಸಾಂ ನಿವಾಸಿಗಳು ಅಲ್ಲ, ಅಕ್ರಮ ಬಾಂಗ್ಲಾ ವಲಸಿಗರೆಂದು ಆರೋಪಿಸಿದ್ದಾರೆ. ಅಲ್ಲದೆ, ಪೊಲೀಸ್ ಇಲಾಖೆ ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.