ಕಾರ್ಕಳ : ಅಕ್ರಮ ಕಸಾಯಿಖಾನೆ ನಡೆಸುವವರ ಹೆಡೆಮುರಿ ಕಟ್ಟಿ : ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್‌ ಆಗ್ರಹ

ಕಾರ್ಕಳ : ತಾಲೂಕಿನ ನಲ್ಲೂರು ಪರಿಸರದಲ್ಲಿ ನಡೆದಿರುವ ಅಕ್ರಮ ಗೋ ಹತ್ಯೆ ದಂಧೆಯ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ ಪೊಲೀಸ್ ಇಲಾಖೆಯನ್ನು ಕಾರ್ಕಳ ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್‌ ನಾಯಕ್‌ ಒತ್ತಾಯಿಸಿದ್ದಾರೆ.

Advertisement

ಪ್ರತಿ ಬಾರಿ ಗೋ ರಕ್ಷಣೆಯ ಕಾರ್ಯ ಮಾಡುವ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆಯೇ ಪ್ರಕರಣ ದಾಖಲಿಸಲಾಗುತ್ತದೆ. ಆದರೆ ವಾಸ್ತವದಲ್ಲಿ, ಇಂತಹ ಅಕ್ರಮ ಗೋ ಹತ್ಯೆ ದಂಧೆಗಳನ್ನು, ಅಕ್ರಮ ಕಸಾಯಿಖಾನೆಗಳನ್ನು ಪತ್ತೆ ಹಚ್ಚಿ ಬಯಲು ಮಾಡುವುದು ನಮ್ಮ ಹಿಂದೂ ಕಾರ್ಯಕರ್ತರೇ ಎನ್ನುವುದನ್ನು ನಾವು ಗಮನಿಸಬೇಕಾದ ಅಂಶ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿದೆ ಎನ್ನುವ ಭರವಸೆಯಿಂದ, ಆರೋಪಿಗಳು ಕಾನೂನಿನ ಭಯುವಿಲ್ಲದೆ ಇಷ್ಟು ರಾಜಾರೋಷವಾಗಿ ತಮ್ಮ ಮನೆಯಲ್ಲಿಯೇ ಅಕ್ರಮ ಗೋ ಮಾಂಸ ವ್ಯಾಪಾರ ಮಾಡುವ ದಂಧೆಯನ್ನು ನಡೆಸಿಕೊಡಿದ್ದರು. ಇಂತಹ ಅಕ್ರಮ ಗೋ ಮಾಂಸ ದಂಧೆಗಳಿಂದಲೇ ಗೋ ಕಳ್ಳತನ ಎಗ್ಗಿಲ್ಲದೆ ನಡೆಯುತ್ತಿರುವುದು. ಇಂತಹ ಅಕ್ರಮ ದಂಧೆಗಳನ್ನು ಮಟ್ಟಹಾಕಿದರೆ ಗೋ ಕಳ್ಳತನವು ತನ್ನಿಂದ ತಾನೇ ನಿಯಂತ್ರಣಕ್ಕೆ ಬರುತ್ತದೆ ಎಂದಿದ್ದಾರೆ.

ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ ಆರೋಪಿಗಳ ಹೆಡೆಮುರಿಕಟ್ಟಿ, ಪೊಲೀಸ್ ಇಲಾಖೆ ಇನ್ನಷ್ಟು ಚುರುಕಾಗಿ ಕಾರ್ಕಳದಾದ್ಯಂತ ಇರುವ ಅಕ್ರಮ ಕಸಾಯಿಖಾನೆಗಳನ್ನು ಶೀಘ್ರವೇ ಪತ್ತೆ ಹಚ್ಚಿ ಅಕ್ರಮ ದಂಧೆ ಕೋರರನ್ನು ಬಂಧಿಸಿ, ಅಕ್ರಮ ಕಸಾಯಿಖಾನೆಗಳನ್ನು ವಶಕ್ಕೆ ಪಡೆದು ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಬೇಕು ಎಂದು ಒತ್ತಾಯಿಸುತ್ತೇನೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಕಲ್ಲಂಗಡಿ, ಐಸ್ ಕ್ರೀಂ ತಿನ್ನುವ ಮುನ್ನ ಹುಷಾರ್‌ – ಆರೋಗ್ಯ ಇಲಾಖೆ ಎಚ್ಚರಿಕೆ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಉಜಿರೆ : ಮಾರ್ಚ್ 3ರಿಂದ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ, ವಿಜಯಗೋಪುರ ಲೋಕಾರ್ಪಣೆ, ನೂತನಬ್ರಹ್ಮರಥ, ಪುಷ್ಪರಥ ಸಮರ್ಪಣೆ – ಶ್ರೀ ಶರತ್ ಕೃಷ್ಣಪಡ್ವೆಟ್ನಾಯ

⚠️ Contents are protected on this website.