ಬಜೆಟ್ : ಮದ್ಯಪ್ರಿಯರಿಗೆ ಬಿಗ್ ಶಾಕ್ ನೀಡಿದ ಸಿಎಂ ಸಿದ್ಧರಾಮಯ್ಯ – ಆದಾಯ ಹೆಚ್ಚಿಸಲು ಹೊಸ ತಂತ್ರ !

ಬೆಂಗಳೂರು, ಮಾ. 06 : ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಬಕಾರಿ ಇಲಾಖೆಯ ಆದಾಯ ಹೆಚ್ಚಿಸಲು ಹೊಸ ತಂತ್ರವನ್ನು ರೂಪಿಸಿದ್ದಾರೆ. ಮದ್ಯದ ಮೇಲೆ ವಿಧಿಸುವ ತೆರಿಗೆಯ ಸ್ವರೂಪವನ್ನು ಬದಲಾಯಿಸುವ ಮೂಲಕ ರಾಜ್ಯದ ರಾಜಸ್ವ ಸಂಗ್ರಹವನ್ನು ಗಣನೀಯವಾಗಿ ಏರಿಕೆ ಮಾಡಲು ನಿರ್ಧರಿಸಿದ್ದಾರೆ. ಇನ್ನು ಮುಂದೆ ಮದ್ಯದಲ್ಲಿರುವ ಆಲ್ಕೋಹಾಲ್ ಅಥವಾ ಮದ್ಯದ ಅಂಶವನ್ನು ಆಧರಿಸಿ ತೆರಿಗೆ ವಿಧಿಸಲು ಸರ್ಕಾರ ತೀರ್ಮಾನಿಸಿದೆ.

Advertisement

ರಾಜ್ಯಾದ್ಯಂತ ಏಕರೂಪದ ಅಬಕಾರಿ ಸುಂಕವನ್ನು ಹೆಚ್ಚಿಸಲು ನಿರ್ಧರಿಸಲಾಗಿದ್ದು, ಎಕ್ಸ್-ಫ್ಯಾಕ್ಟರಿ ದರಪಟ್ಟಿಯ ಆಧಾರದ ಮೇಲೆ ತೆರಿಗೆಯನ್ನು ಲೆಕ್ಕ ಹಾಕಲಾಗುತ್ತದೆ. ಮದ್ಯದ ಬೆಲೆಯನ್ನು ಒಂದೇ ಬಾರಿಗೆ ಏರಿಸುವ ಬದಲು ಹಂತಹಂತವಾಗಿ ಹೆಚ್ಚಿಸಲು ಸರ್ಕಾರ ಯೋಜನೆ ರೂಪಿಸಿದೆ. ಕಳೆದ ವರ್ಷ ಫೆಬ್ರವರಿ ಅಂತ್ಯದವರೆಗೆ ಅಬಕಾರಿ ಇಲಾಖೆಯಿಂದ 36,492 ಕೋಟಿ ರೂ. ರಾಜಸ್ವ ಸಂಗ್ರಹವಾಗಿತ್ತು (12.7% ಬೆಳವಣಿಗೆ). ಆದರೆ, 2026-27ನೇ ಸಾಲಿಗೆ ಬರೋಬ್ಬರಿ 45,000 ಕೋಟಿ ರೂ. ಸಂಗ್ರಹಿಸುವ ಗುರಿ ಸರ್ಕಾರದಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.