ಮೂಡುಬಿದಿರೆ : “ಆಳ್ವಾಸ್ ಪ್ರಗತಿ – 2026” ಎರಡು ದಿನಗಳ ಅತೀದೊಡ್ಡ ಉಚಿತ ಉದ್ಯೋಗ ಮೇಳಕ್ಕೆ ಚಾಲನೆ

Advertisement

ಮೂಡುಬಿದಿರೆ, ಆ. 07 : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ವತಿಯಿಂದ 16ನೇ ಆವೃತ್ತಿಯ “ಆಳ್ವಾಸ್ ಪ್ರಗತಿ – 2026′ ಎರಡು ದಿನಗಳ ಅತೀದೊಡ್ಡ ಉಚಿತ ಉದ್ಯೋಗ ಮೇಳ ಆ. 7ರಂದು ಬೆಳಗ್ಗೆ ಚಾಲನೆ ನೀಡಲಾಗಿದೆ.

Advertisement


ವಿದ್ಯಾಗಿರಿಯ ಡಾ|ವಿ. ಎಸ್. ಆಚಾರ್ಯ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಸಚಿವ ಯು.ಟಿ.ಖಾದರ್ ಪ್ರಗತಿ ಉದ್ಯೋಗ ಮೇಳವನ್ನು ಉದ್ಘಾಟಿಸಿರು. ಶಾಸಕ ಉಮಾನಾಥ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸಂಸದ ಕ್ಯಾ | ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜಾ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ | ಎಂ.ಮೋಹನ ಆಳ್ವ ಸೇರಿ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

Advertisement

ಮೇಳದ ಆರಂಭದಲ್ಲಿ ಯೋಜನೆ, ಸಂಘಟನೆ, ಯಶಸ್ವಿ ಅನುಷ್ಠಾನಕ್ಕೆ ಮಹತ್ವದ ಕೊಡುಗೆ ನೀಡಿದ್ದ, ಇತ್ತೀಚೆಗೆ ನಿಧನ ಹೊಂದಿರುವ ಎ.ಕೆ ಮಹೇಶ್ ಶೇಖ ಅವರ ಹೆಸರನ್ನು ಈ ವರ್ಷದ ವೇದಿಕೆಗೆ ಇಡುವ ಮೂಲಕ ಗೌರವಿಸಲಾಗಿದೆ. ಉದ್ಯಮ ಶೀಲತೆ, ಉದ್ಯೋಗ ಸೃಷ್ಟಿ, ಸಮಾಜ ಸೇವೆಯಲ್ಲಿ ಸಾಧನೆಗೈದ ಬೆಳ್ತಂಗಡಿಯ ಮಾತೃಶ್ರೀ ಇಂಡಸ್ಟ್ರಿಯಲ್ ಪಾರ್ಕ್ ನ ಶ್ರೀಕ್ಷೇತ್ರ ಧರ್ಮಸ್ಥಳ ಸಿರಿ ಗ್ರಾಮೋ ದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಜನಾರ್ದನ, ಎಂಆರ್‌ಜಿ ಗ್ರೂಪ್‌ನ ಸಂಸ್ಥಾಪಕ, ಅಧ್ಯಕ್ಷ ಡಾ| ಕೆ.ಪ್ರಕಾಶ್ ಶೆಟ್ಟಿ, ಭವಾನಿ ಗ್ರೂಪ್ ಸಂಸ್ಥಾಪಕ, ಅಧ್ಯಕ್ಷ ಕುಸುಮೋದರ ಡಿ.ಶೆಟ್ಟಿ, ಪ್ರೊವಿಟ್ ಫುಡ್ಸ್ ಪ್ರೈ.ಲಿ.ನ ಎಂಡಿ.ವಿನ್ಸೆಂಟ್ ಕುಟಿನ್ಹಾ ಹಾಗೂ ಎಕ್ಸ್ ಪರ್ಟೀಸ್ ಕಾಂಟ್ರಾಕ್ಟಿಂಗ್ ಕಂಪೆನಿಯ ಸಹ ಸಂಸ್ಥಾಪಕ ಮಹಮ್ಮದ್ ಅಲ್ಪಾಕ್ ಅವರನ್ನು ಪುರಸ್ಕರಿಸಲಾಯಿತು.

26,300ಕ್ಕೂ ಹೆಚ್ಚು ಉದ್ಯೋಗ

ಈ ಬಾರಿಯ ದೇಶವಿದೇಶಗಳ 350ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪೆನಿಗಳು ಭಾಗವಹಿಸುತ್ತಿದ್ದು, ಐಟಿ, ಐಟಿಇಎಸ್, ಉತ್ಪಾದನೆ, ಬ್ಯಾಂಕಿಂಗ್, ಆರೋಗ್ಯ, ಔಷಧ, ಆತಿಥ್ಯ, ಚಿಲ್ಲರೆ ವ್ಯಾಪಾರ, ಮಾಧ್ಯಮ, ಶಿಕ್ಷಣ ಸಹಿತ ವಿವಿಧ ಕ್ಷೇತ್ರಗಳಲ್ಲಿ 26,300ಕ್ಕೂ ಅಧಿಕ ಉದ್ಯೋಗವಕಾಶಗಳು ಲಭ್ಯವಿರಲಿವೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ