ಗುಂಡ್ಯ : ನಿಲ್ಲಿಸಿದ್ದ ಆಂಬುಲೆನ್ಸ್ ಎಗರಿಸಿದ ಭೂಪ ! ಹಾಸನದಲ್ಲಿ ಆರೋಪಿಯ ಬಂಧನ

Advertisement

ಗುಂಡ್ಯ, ಡಿ. 22 : ಗುಂಡ್ಯ ಚೆಕ್ ಪೋಸ್ಟ್ ಬಳಿ ನಿಲ್ಲಿಸಲಾಗಿದ್ದ ಆಂಬುಲೆನ್ಸ್ ಅನ್ನು ಆರೋಪಿಯೋರ್ವ ಕಳವುಗೈದಿರುವ ಘಟನೆ ನಡೆದಿದೆ. ಪೊಲೀಸರು ತ್ವರಿತ ಕಾರ್ಯಾಚರಣೆಯ ಮೂಲಕ ಆರೋಪಿಯನ್ನು ಬಂಧಿಸಿ, ಕಳವಾಗಿದ್ದ ಅಂಬ್ಯುಲೆನ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ನಿವಾಸಿ ಶೋದನ್ (22) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.

Advertisement

ದೂರುದಾರ ಸುರೇಶ್ ಅವರು ಅಂಬ್ಯುಲೆನ್ಸ್ ಸಂಖ್ಯೆ KA-19-C-7557ರ ಚಾಲಕರಾಗಿದ್ದು, ಪ್ರತಿದಿನ ರಾತ್ರಿ ಗುಂಡ್ಯ ಚೆಕ್‌ಪೋಸ್ಟ್ ಬಳಿ ವಾಹನವನ್ನು ನಿಲ್ಲಿಸಿ ಲಾಕ್ ಮಾಡಿ ಮನೆಗೆ ತೆರಳುತ್ತಿದ್ದರು. ದಿನಾಂಕ ಡಿ. 19ರ ರಾತ್ರಿ ಕೂಡಾ ಅದೇ ರೀತಿಯಲ್ಲಿ ಅಂಬ್ಯುಲೆನ್ಸ್ ಅನ್ನು ನಿಲ್ಲಿಸಿ, ಅಪಘಾತದ ತುರ್ತು ಕರೆ ಬಂದಲ್ಲಿ ಬದಲಿ ಚಾಲಕರ ಅನುಕೂಲಕ್ಕಾಗಿ ಅಂಬ್ಯುಲೆನ್ಸ್‌ನ ಕೀಯನ್ನು ವಾಹನದಲ್ಲೇ ಇಟ್ಟು ಹೋಗಿದ್ದರು. ಆದರೆ ಮರುದಿನ ಡಿ. 20ರಂದು ಬೆಳಿಗ್ಗೆ ಬಂದು ನೋಡಿದಾಗ, ಅಂಬ್ಯುಲೆನ್ಸ್ ನಿಲ್ಲಿಸಿದ್ದ ಸ್ಥಳದಲ್ಲಿ ಇರದೆ ನಾಪತ್ತೆಯಾಗಿತ್ತು. ಈ ಕುರಿತು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಆಂಬುಲೆನ್ಸ್ ಕಳವಾಗಿರುವ ಕುರಿತು ಪ್ರಕರಣ ದಾಖಲಿಸಿದ್ದರು.

Advertisement

ತಕ್ಷಣವೇ ಕಾರ್ಯಪ್ರವೃತ್ತರಾದ ಉಪ್ಪಿನಂಗಡಿ ಪೊಲೀಸರು, ಹಾಸನ ಜಿಲ್ಲಾ ಪೊಲೀಸರ ಸಹಕಾರದೊಂದಿಗೆ, ಡಿ. 20ರಂದು ಆಂಬುಲೆನ್ಸ್ ಅನ್ನು ಪತ್ತೆಹಚ್ಚಿ ಉಡುಪಿ ಜಿಲ್ಲೆಯ ಕಾರ್ಕಳ ನಿವಾಸಿ ಶೋದನ್ (22) ಎಂಬಾತನನ್ನು ಹಾಸನದಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು.ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕಳವಾಗಿದ್ದ ಅಂಬ್ಯುಲೆನ್ಸ್ ಅನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ