ಕೊಕ್ಕಡ : ಅಂಗನವಾಡಿಯಲ್ಲಿ ಆಟಿಕೆಗಳ ಮಧ್ಯೆ ಅಡಗಿದ್ದ ಹಾವು ಕಚ್ಚಿ 4 ವರ್ಷದ ಮಗು ಆಸ್ಪತ್ರೆಗೆ ದಾಖಲು !

ಕೊಕ್ಕಡ, ಜು. 15 : ನಾಲ್ಕು ವರ್ಷದ ಬಾಲಕಿಗೆ ಹಾವು ಕಚ್ಚಿದ ಆತಂಕಕಾರಿ ಘಟನೆ ಸೌತಡ್ಕ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.

ಮಗು ಅಂಗನವಾಡಿಯ ಇತರ ಮಕ್ಕಳೊಂದಿಗೆ ಆಟ ಆಡುತ್ತಿದ್ದ ಸಂದರ್ಭ ಆಟಿಕೆ ಒಳಗಡೆ ಅವಿತಿದ್ದ ಹಾವು ಕಚ್ಚಿದೆ ಎನ್ನಲಾಗಿದೆ. ಹಾವು ಕಚ್ಚಿದ ಪರಿಣಾಮ ಅಸ್ವಸ್ಥಗೊಂಡ ಬಾಲಕಿಯನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಮಲ್ಲಿಗೆಮಜಲು ಮಸೀದಿಯ ಅಧ್ಯಕ್ಷ ಸಿಯಾಬ್ ಅವರ ಪುತ್ರಿ ಪಾತಿಮತ್ ಸಹದಿಯಾ(4) ಹಾವು ಕಡಿತಕ್ಕೊಳಗಾದ ಬಾಲಕಿ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ ಪಾತಿಮತ್ ಸಹದಿಯಾ ಎಂದಿನಂತೆ ಅಂಗನವಾಡಿಗೆ ತೆರಳಿ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಳು. ಈ ವೇಳೆ ತರಗತಿ ಕೊಠಡಿಯೊಳಗೆ ಮಕ್ಕಳ ಆಟಿಕೆಗಳ ನಡುವೆ ಅಡಗಿದ್ದ ಹಾವು ಬಾಲಕಿಗೆ ಕಚ್ಚಿದೆ ಎನ್ನಲಾಗಿದೆ. ಹಾವು ಕಚ್ಚಿದ ತಕ್ಷಣ ಬಾಲಕಿ ಜೋರಾಗಿ ಅಳಲು ಆರಂಭಿಸಿದ್ದು, ಇದನ್ನು ಗಮನಿಸಿದ ಅಂಗನವಾಡಿ ಸಹಾಯಕಿ ಕೂಡಲೇ ಬಾಲಕಿಯ ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಘಟನೆ ನಡೆದ ಸಂದರ್ಭದಲ್ಲಿ ಅಂಗನವಾಡಿ ಶಿಕ್ಷಕಿ ಬಿ.ಎಲ್.ಓ. ಕರ್ತವ್ಯದ ನಿಮಿತ್ತ ಹೊರಗಡೆ ತೆರಳಿದ್ದರಿಂದ ಕೇಂದ್ರದಲ್ಲಿ ಸಹಾಯಕಿ ಮಾತ್ರ ಕರ್ತವ್ಯದಲ್ಲಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ  : ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ ಪೊಲೀಸರು

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

⚠️ Contents are protected on this website.