ಬೆಳಾಲು : ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ, ಮೇ.12 : ತಾಲೂಕಿನ ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬಂಡವಾಳ ವೆಚ್ಚ ಅನುದಾನದಡಿ ರೂ.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.

ಬೆಳಾಲು ಗ್ರಾಮಸ್ಥರ ಬಹುಕಾಲದ ಬೇಡಿಕೆಯಂತೆ ಈ ಪ್ರದೇಶದಲ್ಲಿ ಸೇತುವೆ ನಿರ್ಮಾಣದ ಅಗತ್ಯತೆ ಕುರಿತು ಸರ್ಕಾರದ ಗಮನಕ್ಕೆ ತರಲಾಗಿದ್ದು, ಲೋಕೋಪಯೋಗಿ ಇಲಾಖೆ ಮುಖಾಂತರ ಕಾಮಗಾರಿ ಅನುಷ್ಟಾನಗೊಳಿಸಲು ಅಗತ್ಯ ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಅದರಂತೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದಿಂದ ಅನುದಾನ ಬಿಡುಗಡೆಗೊಂಡಿದೆ.

ಈ ಕಾಮಗಾರಿಯಿಂದ ಸ್ಥಳೀಯ ಸಾರ್ವಜನಿಕರಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸಲಾಗುವುದರ ಜೊತೆಗೆ ಗ್ರಾಮೀಣ ಭಾಗದ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ.

ಈ ಮಹತ್ವದ ಕಾಮಗಾರಿಗೆ ಅನುದಾನ ಮಂಜೂರು ಮಾಡಿದ ರಾಜ್ಯ ಸರ್ಕಾರಕ್ಕೆ ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಿಗೆ ಶಾಸಕ ಹರೀಶ್ ಪೂಂಜ ಅವರು ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.