ಪುತ್ತೂರು : ದ್ವಿಚಕ್ರ ವಾಹನಗಳಿಗೆ ಢಿಕ್ಕಿ ಹೊಡೆದ ಅಪ್ರಾಪ್ತ – ಬಾಲಕನ ತಾಯಿ ವಿರುದ್ಧ ಪ್ರಕರಣ ದಾಖಲು

Advertisement

ಪುತ್ತೂರು, ಮಾ. 14 : ನಾಲ್ಕು ದ್ವಿಚಕ್ರ ವಾಹನಗಳಿಗೆ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ ವಾಹನ ಚಾಲಕ ಅಪ್ರಾಪ್ತ ಬಾಲಕನ ತಾಯಿ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾ. 12 ರಂದು ನಾಲ್ಕು ದ್ವಿಚಕ್ರ ವಾಹನಗಳಿಗೆ ಕಾರೊಂದು ಢಿಕ್ಕಿಪಡಿಸಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ:42/2026, ಕಲಂ: 281, 125(ಎ) ಭಾರತೀಯ ನ್ಯಾಯ ಸಂಹಿತೆ-2023 ಮತ್ತು ಕಲಂ: 134(ಎ&ಬಿ) ಐಎಂವಿ ಕಾಯಿದೆಯಂತೆ ಪ್ರಕರಣ ದಾಖಲಾಗಿತ್ತು.

Advertisement

ಪ್ರಕರಣದ ತನಿಖೆ ನಡೆಸಿದ ಪೊಲೀಸರು ಕಾರಿನ ಚಾಲಕನು ಅಪ್ರಾಪ್ತನಾಗಿರುವ ಹಿನ್ನೆಲೆ ವಾಹನದ ಮಾಲಿಕರಾದ ಅಪ್ರಾಪ್ತ ಬಾಲಕನ ತಾಯಿ ಪುತ್ತೂರು ನಿವಾಸಿ ಕೆ ಎ ಮಮತಾಜ್ (42) ಎಂಬವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಎಚ್ಚರಿಕೆ ಅಗತ್ಯ

ಅಪ್ರಾಪ್ತರು ವಾಹನ ಚಾಲನೆ ಮಾಡುವುದು ಕಾನೂನು ರೀತಿಯಲ್ಲಿ ಅಪರಾಧವಾಗಿದ್ದು, ಈ ಹಿನ್ನಲೆಯಲ್ಲಿ ಪೋಷಕರು ತಮ್ಮ ಮಕ್ಕಳಿಗೆ ವಾಹನ ನೀಡುವ ಮುನ್ನ ಎಚ್ಚರಿಕೆ ವಹಿಸಬೇಕಾಗಿದೆ. ಪುತ್ತೂರು ಪೊಲೀಸರು ಕೈಗೊಂಡಿರುವ ಈ ನಿರ್ಧಾರವು ಎಲ್ಲಾ ಪೋಷಕರಿಗೆ ಒಂದು ಎಚ್ಚರಿಕೆಯ ಕರೆಘಂಟೆಯಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ