ಬಂಟ್ವಾಳ : ಅಪ್ರಾಪ್ತ ವಿದ್ಯಾರ್ಥಿನಿ ಮೇಲೆ ಮಾರಕಾಸ್ತ್ರಗಳಿಂದ ದಾಳಿ – ಜವ್ವರ್ ಎಂಬಾತನಿಂದ ಕೃತ್ಯ ?

Advertisement

ಬಂಟ್ವಾಳ, ಜು. 6 : ಕಾಲೇಜಿಗೆ ತೆರಳುವುದಕ್ಕಾಗಿ ಬಸ್ ಗಾಗಿ ಕಾಯುತ್ತಿದ್ದ ಪಿಯು ವಿದ್ಯಾರ್ಥಿನಿಯ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವ ಆತಂಕಕಾರಿ ಘಟನೆ ವರದಿಯಾಗಿದೆ.

Advertisement

ತಾಲೂಕಿನ ಇರಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಯುವಕನೊಬ್ಬ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ. ಇನ್ನು, ಜವ್ವರ್‌ ಎನ್ನುವಾತ ದಾಳಿ ಮಾಡಿದ್ದಾನೆ ಎನ್ನಲಾಗಿದ್ದು, ಗಾಯಗೊಂಡ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Advertisement

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಬಂಟ್ವಾಳ ನಗರ ಪೊಲೀಸ್‌ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಆರೋಪಿ ಜವ್ವರ್‌ನ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.

ವಿದ್ಯಾರ್ಥಿನಿ ಮೇಲೆ ದಾಳಿ ನಡೆಸಿದ್ದಕ್ಕೆ ಕಾರಣ ಏನು ಎಂಬುದು ಇನ್ನೂ ತಿಳಿದು ಬಂದಿಲ್ಲ, ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ