ಹೊಸದಿಲ್ಲಿ : ರಾ.ಹೆ.ಯಲ್ಲಿ ಸಿಸಿಟಿವಿ ಅಳವಡಿಸಿ ಭಾರತೀಯ ಸೇನೆಯ ಮಾಹಿತಿ ಪಾಕಿಸ್ತಾನಕ್ಕೆ ನೀಡುತ್ತಿದ್ದ ವ್ಯಕ್ತಿಯ ಬಂಧನ !

ಹೊಸದಿಲ್ಲಿ, ಮೇ 22 : ಪಂಜಾಬ್‌ನ ಪಠಾಣ್‌ಕೋಟ್‌ನ ಪೊಲೀಸರು ಶಂಕಿತ ಬೇಹುಗಾರಿಕೆ ಜಾಲವನ್ನು ಬಯಲಿಗೆಳೆದಿದ್ದಾರೆ. ಭಾರತೀಯ ಸೇನೆ ಮತ್ತು ಅರೆಸೈನಿಕ ಪಡೆಗಳ ಚಲನವಲನಗಳ ಬಗ್ಗೆ ಸೂಕ್ಷ್ಮ ಮಾಹಿತಿಯನ್ನು ಪಾಕಿಸ್ತಾನದ ಹ್ಯಾಂಡ್ಲರ್‌ಗಳೊಂದಿಗೆ ಹಂಚಿಕೊಂಡಿದ್ದ ಆರೋಪದಡಿ ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.

Advertisement

ಚಕ್ ಧಾರಿವಾಲ್ ಗ್ರಾಮದ ನಿವಾಸಿ ಬಲ್ಟಿತ್ ಸಿಂಗ್ ಅಲಿಯಾಸ್ ಬಿಟ್ಟು ಎಂಬಾತನನ್ನು ಬಂಧಿಸಲಾಗಿದೆ. ಈತ ಸೇನೆ ಮತ್ತು ಅರೆಸೈನಿಕ ಪಡೆಗಳ ಚಲನವಲನಗಳ ಮೇಲೆ ಕಣ್ಣಿಡಲು ರಾಷ್ಟ್ರೀಯ ಹೆದ್ದಾರಿ -44 ರ ಪಠಾಣ್‌ಕೋಟ್-ಜಮ್ಮು ಪ್ರದೇಶದ ಸೇತುವೆಯ ಬಳಿಯ ಅಂಗಡಿಯೊಂದರಲ್ಲಿ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪಾಕಿಸ್ತಾನ ಮತ್ತು ವಿದೇಶಗಳಲ್ಲಿ ನೆಲೆಸಿರುವ ಹ್ಯಾಂಡ್ಲರ್ ಗಳಿಗೆ ಕಣ್ಣಾವಲು ಮಾಹಿತಿಯನ್ನು ಎಲೆಕ್ಟ್ರಾನಿಕ್ ಮೂಲಕ ರವಾನಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ದಲ್ಲಿಂದರ್ ಸಿಂಗ್ ಧಿಲ್ಲೋನ್ ಹೇಳಿದ್ದಾರೆ.
ವಿಚಾರಣೆಯ ಸಮಯದಲ್ಲಿ, ಜನವರಿಯಲ್ಲಿ ಸುಜನ್‌ಪುರ ಬಳಿಯ ಹೆದ್ದಾರಿಯಲ್ಲಿರುವ ಅಂಗಡಿಯಲ್ಲಿ ಇಂಟರ್ನೆಟ್ ಆಧಾರಿತ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದಾಗಿ ಬಿಟ್ಟು ಒಪ್ಪಿಕೊಂಡಿದ್ದಾನೆ.

ಬಿಟ್ಟುಗೆ ದುಬೈನಲ್ಲಿರುವ ಅಪರಿಚಿತ ವ್ಯಕ್ತಿಯಿಂದ ನಿರ್ದೇಶನಗಳು ಬರುತ್ತಿದ್ದವು. ಆತನಿಗೆ 40,000 ರೂ.ಗಳನ್ನು ನೀಡಲಾಗಿತ್ತು. ಆತನಿಂದ ಸಿಸಿಟಿವಿ ಕ್ಯಾಮೆರಾ ಜೊತೆಗೆ ಇಂಟರ್ನೆಟ್ ವೈಫೈ ರೂಟರ್ ವಶಪಡಿಸಿಕೊಳ್ಳಲಾಗಿದೆ. ಪಠಾಣ್‌ಕೋಟ್-ಜಮ್ಮು ಹೆದ್ದಾರಿಯಲ್ಲಿ ಅನುಮಾನಾಸ್ಪದ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಗುಪ್ತಚರ ಮಾಹಿತಿ ಪಡೆದ ನಂತರ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ನಂತರ ಸುಜನ್‌ಪುರ ಪೊಲೀಸರು ನಾಲ್ವರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಬಿಟ್ಟು ಜೊತೆಗೆ, ವಿಕ್ರಮ್‌ ಜಿತ್ ಸಿಂಗ್ ಅಲಿಯಾಸ್ ವಿಕ್ಕಾ, ಬಲ್ವಿಂದರ್ ಸಿಂಗ್ ಅಲಿಯಾಸ್ ವಿಕ್ಕಿ ಮತ್ತು ತರಣ್‌ ಪ್ರೀತ್ ಸಿಂಗ್ ಅಲಿಯಾಸ್ ತನ್ನು ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಕ್ರಿಮಿನಲ್ ಮತ್ತು ರಾಷ್ಟ್ರವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.