ಬಂಟ್ವಾಳ : 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಂಚನೆ ಪ್ರಕರಣದ ಆರೋಪಿ ಬಂಧನ

ಬಂಟ್ವಾಳ, ಅ. 07 : ಬ್ಯಾಂಕ್ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಗೆ ವಂಚಿಸಿದ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬಲ್ನಾಡು ನಿವಾಸಿ ಹಿಬ್ಬಾತುಲ್ಲ (52) ಎಂದು ಗುರುತಿಸಲಾಗಿದೆ.

ಬ್ಯಾಂಕ್‌ನಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ಇಬ್ಬರಿಂದ ಹಣ ಪಡೆದು, ಕೆಲಸವನ್ನೂ ಕೊಡಿಸದೆ, ಹಣವನ್ನೂ ಹಿಂತಿರುಗಿಸದೆ ವಂಚಿಸಿದ ಆರೋಪದ ಮೇಲೆ 2011ರಲ್ಲಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಹಿಬ್ಬಾತುಲ್ಲ ವಿರುದ್ಧ ಪ್ರಕರಣ ದಾಖಲಾಗಿತ್ತು.

ಕಾರ್ಯಾಚರಣೆಯ ಭಾಗವಾಗಿ ವಿಟ್ಲ ಪೊಲೀಸರು ಅಕ್ಟೋಬರ್ 5 ರಂದು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ: ವಿಟ್ಲದ ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಕುಪ್ಪೆಟ್ಟಿ – ಉಪ್ಪಿನಂಗಡಿ ರಸ್ತೆ ವಿರುದ್ಧ ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ :  ಟೆಂಪೋ ಹಾಗೂ 2 ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ – ಸ್ಕೂಟ‌ರ್ ಸವಾರ ಸಾವು