ಮಂಗಳೂರು : ತಲೆಮರೆಸಿಕೊಂಡಿದ್ದ ಆರೋಪಿ ನೌಮನ್ ನನ್ನು ಬಂಧಿಸಿದ ಪೊಲೀಸರು

Advertisement

ಮಂಗಳೂರು, ಜ. 07 : ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಕಸಬಾ ಬೆಂಗರೆಯ ನೌಮಾನ್ (31) ಎಂದು ಗುರುತಿಸಲಾಗಿದೆ.
ಕಾವೂರು ಠಾಣಾ ವ್ಯಾಪ್ತಿಯಲ್ಲಿ ನಡೆದ ಅಪರಾಧ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡಿದ್ದ ಆರೋಪಿ ನೌಮಾನ್ ಇದೀಗ ಪೊಲೀಸರ ವಶವಾಗಿದ್ದಾನೆ.

Advertisement

ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯದಿಂದ ಹಲವು ಬಾರಿ ವಾರೆಂಟ್ ಹೊರಡಿಸಿದರೂ ಹಾಜರಾಗದೆ ಕಳೆದ 5 ವರ್ಷದಿಂದ ತಲೆಮರೆಸಿಕೊಂಡಿದ್ದ. ಆರೋಪಿಯನ್ನು ಕಾವೂರು ಠಾಣೆಯ ಇನ್‌ಸ್ಪೆಕ್ಟರ್ ರಾಘವೇಂದ್ರ ಬೈಂದೂರು, ಎಸ್ಟ್ ಮಲ್ಲಿಕಾರ್ಜುನ ಬಿರಾದಾರ್‌ರ ಮಾರ್ಗದರ್ಶನಂತೆ ಹೆಡ್‌ಕಾನ್‌ಸ್ಟೇಬಲ್ ಬಾಲಕೃಷ್ಣ ಕಾನ್‌ಸ್ಟೇಬಲ್‌ಗಳಾದ ಚಂದ್ರಶೇಖರ, ರಾಘವೇಂದ್ರ ಎಚ್.ಎಂ.ಮಂಗಳವಾರ ಉಪ್ಪಳ ಸಮೀಪದ ಕೈಕಂಬ ಎಂಬಲ್ಲಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ