ರಾಮ ಮಂದಿರದ ಮೇಲೆ ದಾಳಿಗೆ ಸಂಚು ರೂಪಿಸಿದ್ದ ಆರೋಪಿಯನ್ನು ಜೈಲಿನಲ್ಲೇ ಕೊಲೆಗೈದ ಕಾಶ್ಮೀರಿ ಯುವಕ

ಲಕ್ನೋ, ಫೆ. 10 : ಅಯೋಧ್ಯೆ ಶ್ರೀ ರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಜೈಲು ಸೇರಿದ್ದ ಆರೋಪಿಯನ್ನು ಫರಿದಾಬಾದ್ ಜೈಲಿನಲ್ಲೇ ಸಹ ಕೈದಿಯೊಬ್ಬ ಕೊಲೆ ಮಾಡಿದ್ದಾನೆ.

ಅಬ್ದುಲ್ ರೆಹಮಾನ್(20) ಕೊಲೆಯಾದ ಆರೋಪಿಯಾಗಿದ್ದು, ಜೈಲಿನಲ್ಲಿದ್ದ ಕಾಶ್ಮೀರಿ ಯುವಕ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ.

ಅಬ್ದುಲ್ ರೆಹಮಾನ್ ಮತ್ತು ಅರುಣ್‌ ಚೌಧರಿ ಮಧ್ಯೆ ಭಾನುವಾರ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ರಾತ್ರಿ 8 ಗಂಟೆಯ ವೇಳೆಗೆ ಅರುಣ್ ಚೌಧರಿ ಹರಿತವಾದ ವಸ್ತುವಿನಿಂದ ತಲೆಗೆ ಹೊಡೆದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರೆಹಮಾನ್‌ನನ್ನು ಜಿಲ್ಲಾಸ್ಪತ್ರೆಗೆ ತರಲಾಗಿತ್ತು. ಪರೀಕ್ಷೆ ನಡೆಸಿದ ವೈದ್ಯರು ರೆಹಮಾನ್‌ ಮೃತಪಟ್ಟಿದ್ದಾನೆ ಎಂದು ಹೇಳಿದ್ದಾರೆ. ಈ ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಲಾಗಿದೆ.

ರೆಹಮಾನ್ ಉತ್ತರ ಪ್ರದೇಶದ ಫೈಜಾಬಾದ್ ಜಿಲ್ಲೆಯ ಮಿಲ್ಕಿಪುರ ನಿವಾಸಿಯಾಗಿದ್ದು ಮಾರ್ಚ್ 2, 2025 ರಂದು ಫರಿದಾಬಾದ್‌ನ ಪಾಲಿ ಗ್ರಾಮದ ಬಳಿ, ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಮತ್ತು ಹರಿಯಾಣ ವಿಶೇಷ ಕಾರ್ಯಪಡೆ ಜಂಟಿ ಕಾರ್ಯಾಚರಣೆ ನಡೆಸಿ ಬಂಧಿಸಿತ್ತು.

ಆತನ ಬಳಿಯಿದ್ದ ಎರಡು ಹ್ಯಾಂಡ್ ಗ್ರೆನೇಡ್‌ಗಳನ್ನು ಬಾಂಬ್ ನಿಷ್ಕ್ರಿಯ ದಳಗಳು ನಿಷ್ಕ್ರಿಯಗೊಳಿಸಿದ್ದವು. ನಕಲಿ ಗುರುತಿನ ಚೀಟಿ ಹೊಂದಿದ್ದ ರೆಹಮಾನ್‌ ಆಟೋರಿಕ್ಷಾ ಚಾಲಕನಾಗಿ ಕೆಲಸ ಮಾಡುತ್ತಿದ್ದ,ಬಂಧನದ ಸಮಯದಲ್ಲಿ ವಶಪಡಿಸಿಕೊಂಡ ಡಿಜಿಟಲ್ ಸಾಧನಗಳಲ್ಲಿ ರಾಮ ಮಂದಿರಕ್ಕೆ ಸಂಬಂಧಿಸಿದ ವೀಡಿಯೊಗಳು ಮತ್ತು ಸಾಮಗ್ರಿಗಳು, ಜೊತೆಗೆ ಉದ್ದೇಶಿತ ದಾಳಿಯ ಸೂಚನೆಗಳು ಮತ್ತು ವಿವರಗಳು ಇದ್ದವು.

ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯದೊದಿಗೆ ಸಂಬಂಧಿಸಿದ ಜಾಲಗಳ ಮೂಲಕ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆ ಐಎಸ್‌ಐ ಸಂಪರ್ಕ ಹೊಂದಿರುವ ಹ್ಯಾಂಡ್ಲರ್‌ಗಳ ಮೂಲಕ ಗ್ರೆನೇಡ್‌ಗಳನ್ನು ಪಡೆಯಲಾಗಿದೆ ಎಂದು ಅಧಿಕಾರಿಗಳು ಈ ಹಿಂದೆ ಹೇಳಿದ್ದರು.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಭೀಕರ ರೈಲು ಅಪಘಾತ : ಕ್ರಿಕೆಟ್ ಮೈದಾನಕ್ಕೆ ತೂರಿ ಬಿದ್ದಿದ್ದ ವ್ಯಕ್ತಿಯ ರುಂಡ !

ತಾಲೂಕು, ಬೆಳ್ತಂಗಡಿ

ಉಪ್ಪಿನಂಗಡಿ : ನಿಂತಿದ್ದ ಟಿಪ್ಪರ್ ಹಿಂಬದಿಗೆ ಕಾರು ಢಿಕ್ಕಿ – 4 ವರ್ಷದ ಮಗು ಸೇರಿ ಐವರಿಗೆ ಗಾಯ

⚠️ Contents are protected on this website.