ವಿಟ್ಲ : ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ – ಆರೋಪಿಯ ಬಂಧನ

Advertisement

ವಿಟ್ಲ, ಆ. 18 : ಅಪ್ರಾಪ್ತ ವಯಸ್ಸಿನ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದ ಮೇಲೆ ವಿಟ್ಲ ಪೊಲೀಸರು 53 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆ.15 ರಂದು ಅಳಿಕೆಯಿಂದ ಪುತ್ತೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣ ಮಾಡುತ್ತಿದ್ದ ಅಪ್ರಾಪ್ತ ಬಾಲಕನ ಪಕ್ಕದಲ್ಲಿ ವಿಟ್ಲ ಖಾಸಗಿ ಬಸ್‌ ನಿಲ್ದಾಣದಿಂದ ಅಪರಿಚಿತ ವ್ಯಕ್ತಿಯೊಬ್ಬರು ಕುಳಿತು ಪ್ರಯಾಣ ಮಾಡುತ್ತಿದ್ದ ಸಂದರ್ಭದಲ್ಲಿ ಅನುಚಿತವಾಗಿ ವರ್ತಿಸಿರುವುದಾಗಿ ಆರೋಪಿಸಲಾಗಿದೆ.

ನಂತರ ಬಾಲಕ ಮನೆಗೆ ತೆರಳಿದ ಸಂದರ್ಭದಲ್ಲಿ ಅದೇ ವ್ಯಕ್ತಿ ಮನೆಗೆ ಬಂದು ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಮಾಡಿದ ವಿಟ್ಲ ಠಾಣಾ ಪೊಲೀಸರು ವಿಟ್ಲ ಕೊಂಡಗಾಯಿ ನಿವಾಸಿ ಉಮೇಶ್‌ (53) ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ