ಬೆಳ್ತಂಗಡಿ: ಧರ್ಮಸ್ಥಳ ದರೋಡೆ ಪ್ರಕರಣ; 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬೆಂಗಳೂರಿನಲ್ಲಿ ಬಂಧನ

ಬೆಳ್ತಂಗಡಿ, ಆ. 05 : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು ಐದು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಬಂಧಿತನನ್ನು ಬೆಂಗಳೂರು ನಿವಾಸಿ ಮೂರ್ತಿ ಅಲಿಯಾಸ್ ಪಿಂಟು (37) ಎಂದು ಗುರುತಿಸಲಾಗಿದೆ. ಈತನ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯ ಅಪರಾಧ ಸಂಖ್ಯೆ 64/2017ರಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 395, 397 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಇದರಿಂದ ನ್ಯಾಯಾಲಯವು ಆತನ ವಿರುದ್ಧ ಬಂಧನ ವಾರಂಟ್ ಹೊರಡಿಸಿತ್ತು.

ವಾರಂಟ್ ಆಧರಿಸಿ ಕಾರ್ಯಾಚರಣೆ ನಡೆಸಿದ ಧರ್ಮಸ್ಥಳ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ವೃಷಭ ಮತ್ತು ಚರಣ್ ರಾಜ್ ಅವರು ಬೆಂಗಳೂರಿನಲ್ಲಿ ಆರೋಪಿಯ ಸುಳಿವು ಪತ್ತೆಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾದರು.

ಬಂಧಿತನನ್ನು ಆಗಸ್ಟ್ 5ರಂದು ನ್ಯಾಯಾಧೀಶರ ಎದುರು ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ತಾಲೂಕು, ಬೆಳ್ತಂಗಡಿ

ಉಜಿರೆ ಎಸ್‌ಡಿಎಂಐಟಿಯಲ್ಲಿ ಅ. 29ರಿಂದ ‘ಸ್ಪರ್ಧಂ-2026’ ಅಂತರಕಾಲೇಜು ಸ್ಪರ್ಧೋತ್ಸವ – ಅ. 30ರಂದು ಸ್ಟಾರ್ ನೈಟ್

ಟಾಪ್ ಸುದ್ದಿಗಳು, ರಾಜ್ಯ / ದೇಶ

ಮುಂಬೈ : ನೆಪಕ್ಕೆ ರ‍್ಯಾಪಿಡೋ ರೈಡರ್ : ಪ್ರಧಾನಿ ಮೋದಿ ಹತ್ಯೆಗೆ ಜೈಶ್ ಉಗ್ರರೊಂದಿಗೆ ಸಂಚು ರೂಪಿಸುತ್ತಿದ್ದ ಅಖ್ತರ್ ಎಂಬಾತ ಎಟಿಎಸ್ ಬಲೆಗೆ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಕನ್ಯಾಡಿ : ಅಯೋಧ್ಯೆಯ ಕನ್ಯಾಡಿ ಶ್ರೀರಾಮ ಮಠದ ಯೋಜನೆಗೆ ಮಸ್ಕತ್‌ನ ಶ್ರೀರಾಮ ಭಕ್ತರಿಂದ ₹10 ಲಕ್ಷಕ್ಕೂ ಅಧಿಕ ದೇಣಿಗೆ