ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲಾ ದೇಹದಾರ್ಢ್ಯ ಸಂಸ್ಥೆಯ ನೂತನ ಕಾರ್ಯಾಧ್ಯಕ್ಷರಾಗಿ ಶ್ರೀ ಅರುಣ್ ಕುಮಾರ್ ಗಟ್ಟಿ ಆಯ್ಕೆ

ಬಂಟ್ವಾಳ, ನ. 13 : ದಕ್ಷಿಣ ಕನ್ನಡ ಜಿಲ್ಲೆಯ ಕ್ರೀಡಾ ಮತ್ತು ಸಾಮಾಜಿಕ ವಲಯದಲ್ಲಿ ಮತ್ತೊಬ್ಬ ಸಮರ್ಥ ನಾಯಕನಿಗೆ ಮಹತ್ವದ ಜವಾಬ್ದಾರಿ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲಾ ದೇಹದಾರ್ಢ್ಯ ಸಂಸ್ಥೆಯ ನೂತನ ಕಾರ್ಯಾಧ್ಯಕ್ಷರಾಗಿ ಶ್ರೀ ಅರುಣ್ ಕುಮಾರ್ ಗಟ್ಟಿ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಶ್ರೀ ಅರುಣ್ ಕುಮಾರ್ ಗಟ್ಟಿ ಅವರು ಕೇವಲ ಕ್ರೀಡಾ ಕ್ಷೇತ್ರಕ್ಕೆ ಮಾತ್ರ ಸೀಮಿತರಾಗದೆ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲೂ ಮುಂಚೂಣಿಯಲ್ಲಿ ನಿಂತು ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ. ಸಮಾಜ ಸೇವೆಯೆಂದರೆ ಅವರಿಗೆ ಅಚ್ಚುಮೆಚ್ಚು. ವಿಶೇಷವಾಗಿ ದೇಹದಾರ್ಢ್ಯ ಕ್ರೀಡೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಇವರು ತಾಲೂಕು ಮಟ್ಟ, ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದಲ್ಲಿ ಹಲವು ಬೃಹತ್ ದೇಹದಾರ್ಢ್ಯ ಸ್ಪರ್ಧೆಗಳನ್ನು ಯಶಸ್ವಿಯಾಗಿ ಆಯೋಜಿಸಿಕೊಂಡು ಬಂದಿದ್ದಾರೆ. ಈ ಸ್ಪರ್ಧೆಗಳ ಮೂಲಕ ಬರುವ ಉಳಿತಾಯದ ಹಣವನ್ನು ತಮ್ಮ ಸ್ವಂತ ಬಳಕೆಗೆ ಇಟ್ಟುಕೊಳ್ಳದೆ, ಆ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ, ಬಡ ಕುಟುಂಬಗಳಿಗೆ ಹಾಗೂ ನಿರ್ಗತಿಕ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಧನಸಹಾಯ ನೀಡುವ ಮೂಲಕ ಮಾದರಿಯಾಗಿದ್ದಾರೆ.

ಸಾಮಾಜಿಕ ಕಳಕಳಿ, ಕ್ರೀಡೆಯ ಮೇಲಿನ ಅಪ್ಪಟ ಅಭಿಮಾನ ಮತ್ತು ದೇಹದಾರ್ಢ್ಯ ಸ್ಪರ್ಧೆಗಳ ಮೂಲಕ ನೂರಾರು ಯುವಕರಿಗೆ ಹಾಗೂ ಕ್ರೀಡಾಪಟುಗಳಿಗೆ ಇವರು ಸದಾ ಬೆನ್ನೆಲುಬಾಗಿ ನಿಂತಿದ್ದಾರೆ. ಕ್ರೀಡಾ ಹಾಗೂ ಸಮಾಜಮುಖಿ ಸೇವೆಯಲ್ಲಿ ಇವರು ಸಲ್ಲಿಸಿರುವ ಈ ಅಮೂಲ್ಯ ಸೇವೆಯನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲಾ ದೇಹದಾರ್ಢ್ಯ ಸಂಸ್ಥೆಯು ಇವರಿಗೆ ನೂತನ ಕಾರ್ಯಾಧ್ಯಕ್ಷ ಸ್ಥಾನವನ್ನು ನೀಡಿ ಗೌರವಿಸಿದೆ.

ಶ್ರೀ ಅರುಣ್ ಕುಮಾರ್ ಗಟ್ಟಿ ಅವರ ಈ ನೂತನ ಜವಾಬ್ದಾರಿಯು ಜಿಲ್ಲೆಯ ದೇಹದಾರ್ಢ್ಯ ಕ್ರೀಡೆಗೆ ಮತ್ತಷ್ಟು ಬಲ ತುಂಬಲಿದೆ ಎಂದು ಕ್ರೀಡಾಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.

Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : 10 ವರ್ಷ ಪ್ರೀತಿಸಿ ಮದುವೆಯಾದವಳಿಗೆ ಮೋಸ – ಎರಡು ಮಕ್ಕಳ ತಾಯಿಯನ್ನ ಗುಟ್ಟಾಗಿ ಮದುವೆಯಾದ ಸದಾಕತ್ !

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ​​ಬಳಿ ಮಾನವನ ತಲೆಬುರುಡೆ ಪತ್ತೆ!

ಟಾಪ್ ಸುದ್ದಿಗಳು, ತಾಲೂಕು, ಬಂಟ್ವಾಳ

ಬಂಟ್ವಾಳ: ವಿಟ್ಲದ ಪಟಾಕಿ ಅಂಗಡಿ ಹಿಂಭಾಗ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು