ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ : ಮರು ತನಿಖೆಗೆ ಸಿಎಂ ಸುವೇಂದು ಅಧಿಕಾರಿ ಆದೇಶ

Advertisement

ಕೋಲ್ಕತ್ತಾ, ಆ. 10 : ಪಶ್ಚಿಮ ಬಂಗಾಳದ ಆರ್.ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 2024ರಲ್ಲಿ ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಆದೇಶಿಸಿದ್ದಾರೆ.

“ಈ ಪ್ರಕರಣ ದೇಶಾದ್ಯಂತ ಭಾರೀ ಆಕ್ರೋಶ ಮತ್ತು ಪ್ರತಿಭಟನೆಗೆ ಕಾರಣವಾಗಿತ್ತು. ಸಂತ್ರಸ್ತೆಯ ತಾಯಿ ಹಾಗೂ ಹಾಲಿ ಬಿಜೆಪಿ ಶಾಸಕಿ ರತ್ನಾ ದೇಬನಾಥ್ ಅವರು ಮರು ತನಿಖೆಗೆ ಮನವಿ ಮಾಡಿದ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ” ಎಂದು ಹೇಳಿದ್ದಾರೆ.

“ಮುಖ್ಯ ಕಾರ್ಯದರ್ಶಿ ಹಾಗೂ ತಜ್ಞರ ತಂಡದೊಂದಿಗೆ ಸುದೀರ್ಘ ಚರ್ಚೆ ನಡೆಸಿದ ಬಳಿಕ Special Commission Act, 1952 ಅಡಿಯಲ್ಲಿ ಹೊಸ ತನಿಖೆ ನಡೆಸಲು ನಿರ್ಧರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲರಾಗಿದ್ದಾರೆ” ಎಂದು ತಿಳಿಸಿದ್ದಾರೆ.

“ಸಂತ್ರಸ್ತೆಯ ಅಂತ್ಯಕ್ರಿಯೆ ವೇಳೆ ನಡೆದಿದೆ ಎನ್ನಲಾದ ಲೋಪಗಳ ಬಗ್ಗೆಯೂ ಪ್ರತ್ಯೇಕ ತನಿಖೆನಡೆಸಬೇಕು. ತಪ್ಪಿತಸ್ಥರು ಪತ್ತೆಯಾದರೆ ತಕ್ಷಣ ಕ್ರಮ ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.

Advertisement
Advertisement

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ