ಉಳ್ಳಾಲ : ಆಟೋ ರಿಕ್ಷಾ ಕಳವು ಪ್ರಕರಣ – ಆಟೋ ಸಹಿತ, ಆರೋಪಿಯ ಬಂಧನ

ಉಳ್ಳಾಲ, ಡಿ. 29 : ತಾಲೂಕಿನ ಚೋಟಾ ಮಂಗಳೂರು ಭಗವತಿ ರಸ್ತೆಯಲ್ಲಿ ನಿಲ್ಲಿಸಲಾಗಿದ್ದ ಆಟೋ ರಿಕ್ಷಾ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿ, ಆಟೋ ರಿಕ್ಷಾ ವಶಪಡಿಸಿಕೊಂಡಿದ್ದಾರೆ.

Advertisement

ಅಕ್ಕರೆ ಕೆರೆ ನಿವಾಸಿ ಮುಹಮ್ಮದ್ ಶಾಝಿಲ್ (29) ಬಂಧಿತ ಆರೋಪಿಯಾಗಿದ್ದಾನೆ. ಈತನನ್ನು ಬಂಧಿಸಿರುವ ಪೊಲೀಸರು ಕಳವುಗೈದ ಆಟೋ ರಿಕ್ಷಾವನ್ನು ವಶಪಡಿಸಿಕೊಂಡಿದ್ದಾರೆ. ಚೋಟ ಮಂಗಳೂರು ನಿವಾಸಿ ನರೇಂದ್ರ ಕುಮಾರ್ ಅವರು ತನ್ನ ಆಟೋ ರಿಕ್ಷಾವನ್ನು ತನ್ನ ಮನೆಯ ಕಂಪೌಂಡ್ ನ ಹೊರಗಡೆ ಇರುವ ಭಗವತಿ ರಸ್ತೆಯಲ್ಲಿ ಡಿ.13ರಂದು ರಾತ್ರಿ ನಿಲ್ಲಿಸಿದ್ದರು.

ಈ ರಿಕ್ಷಾವು ಕಳವಾಗಿದ್ದು, ಈ ಘಟನೆ ಡಿ.14 ರಂದು ಬೆಳಿಗ್ಗೆ ಬೆಳಕಿಗೆ ಬಂದಿತ್ತು. ಈ ಬಗ್ಗೆ ಅವರು ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಡಿ.19ರಂದು ಈ ಕುರಿತು ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಲಘು ಮಳೆ- 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು: ಪಾಂಡೇಶ್ವರ ಅಗ್ನಿಶಾಮಕ ಚಾಲಕ ಕಾರ್ತಿಕ್‌ ಗೆ ಮುಖ್ಯಮಂತ್ರಿಗಳ ಚಿನ್ನದ ಪದಕ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಹಾರಾಷ್ಟ್ರದಲ್ಲಿ ರಸ್ತೆ ಅಪಘಾತ- ಮಂಗಳೂರು ಮೂಲದ ಯುವ ಟ್ರಕ್ ಚಾಲಕ ಸಾವು

⚠️ Contents are protected on this website.