ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ : ಬಾಲಕ ದಾರುಣ ಸಾವು

ಕುತ್ರೊಟ್ಟು : ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಓರ್ವ ಬಾಲಕ ದಾರುಣವಾಗಿ ಮೃತಪಟ್ಟ ಘಟನೆ ಲಾಯಿಲ ಗ್ರಾಮದ ಕುತ್ರೋಟ್ಟು – ಟಿ.ಬಿ.ಕ್ರಾಸ್ ರಸ್ತೆಯ ಹೊಕ್ಕಿಲ ಎಂಬಲ್ಲಿ ನಡೆದಿದೆ. ಆಟೋ ಚಾಲಕ ಸೇರಿದಂತೆ ಆಟೋದಲ್ಲಿದ್ದ ಐದು ಮಂದಿಗೆ ಗಾಯಗಳಾಗಿದೆ.

Advertisement

ನಾವೂರಿನ ಶಶಿ ಎಂಬವರಿಗೆ ಸೇರಿದ ಆಟೋ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು, ಆಟೋದಲ್ಲಿದ್ದ ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಕುಂಡಡ್ಕ ನಿವಾಸಿ ಗಣೇಶ್ ಪುತ್ರ ತನ್ವಿತ್(12) ಮೃತಪಟ್ಟ ಬಾಲಕನಾಗಿದ್ದಾನೆ. ಆಟೋ ಪಲ್ಟಿಯಾದ ರಭಸಕ್ಕೆ ಗಾಯಗೊಂಡಿದ್ದ ತನ್ವಿತ್ ನನ್ನು ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಆಟೋದಲ್ಲಿದ್ದ ಐದು ಮಂದಿಗೆ ಗಾಯವಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವಕ್ಕೆ ಆಟೋದಲ್ಲಿ ಹೋಗುತ್ತಿದ್ದಾಗ ಘಟನೆ ನಡೆದಿದ್ದು, ಬೆಳ್ತಂಗಡಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಸಚಿವ ಸ್ಥಾನಕ್ಕಾಗಿ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ 31 ಶಾಸಕರಿಂದ ಪತ್ರ – ಕೈ ಪಾಳಯದಲ್ಲಿ “ಪತ್ರ ಸ್ಫೋಟ”

ಟಾಪ್ ಸುದ್ದಿಗಳು, ರಾಜ್ಯ / ದೇಶ

ತಮಿಳುನಾಡು : ಎಐಎಡಿಎಂಕೆ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೆ 10,000 ರೂ. ಘೋಷಣೆ !

ವಿದೇಶ

ಅಮೆರಿಕದಲ್ಲಿ ಭಾರಿ ಹಿಮಪಾತ: 5,600 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು, ಶಾಲೆಗಳಿಗೆ ರಜೆ

⚠️ Contents are protected on this website.