ಅಯೋಧ್ಯೆ : ಇದು ಕೇವಲ ಧ್ವಜ ಅಲ್ಲ, ಭಾರತೀಯ ಸಭ್ಯತೆಯ ಪ್ರತೀಕ – ನರೇಂದ್ರ ಮೋದಿ

ಅಯೋಧ್ಯೆ : 500 ವರ್ಷಗಳ ಯಜ್ಞ ಇಂದು ಪೂರ್ಣಗೊಂಡಿದೆ. ರಾಮ ಭಕ್ತರ ಮನಸ್ಸಿನಲ್ಲಿ ಅಪಾರ ಆನಂದವಿದೆ. ಇದು ಕೇವಲ ಧ್ವಜ ಅಲ್ಲ, ಭಾರತೀಯ ಸಭ್ಯತೆಯ ಪ್ರತೀಕ. ಈ ಧ್ವಜ ರಾಮರಾಜ್ಯವನ್ನು ಪ್ರತಿರೂಪಿಸುತ್ತದೆ. ಈ ಧ್ವಜ ಸಂತರ ಸಾಧನೆ, ಶ್ರೀರಾಮನ ಆದರ್ಶದ ಉದ್ಘೋಷವಾಗಿದೆ. ಈ ಧ್ವಜ ರಾಮ ಮಂದಿರದ ಕಿರೀಟವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಹೇಳಿದರು.

Advertisement

ಅಯೋಧ್ಯೆ ರಾಮ ಮಂದಿರದಲ್ಲಿ ಧರ್ಮ ಧ್ವಜಾರೋಹಣ ನೆರವೇರಿಸಿದ ಬಳಿಕ ಮಾತನಾಡಿದ ಅವರು, ಇಂದು ಅಯೋಧ್ಯೆ ನಗರ ಹೊಸ ಇತಿಹಾಸಕ್ಕೆ ಸಾಕ್ಷಿಯಾಗಿದೆ. ಸಂಪೂರ್ಣ ಭಾರತ, ವಿಶ್ವ ರಾಮಮಯವಾಗಿದೆ. ಈ ಧ್ವಜ ದೂರದಿಂದಲೇ ರಾಮ ಮಂದಿರದ ದರ್ಶನ ಮಾಡಿಸುತ್ತದೆ. ರಾಮ ಮಂದಿರಾ ನಿರ್ಮಾಣಕ್ಕೆ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ವಿಕಸಿತ ಭಾರತ ನಮ್ಮ ಸಂಕಲ್ಪವಾಗಿದೆ. ಒಂದೇ ಸ್ಥಳದಲ್ಲಿ ವಾಲ್ಮೀಕಿ, ಅಹಲ್ಯ ಸೇರಿ ಎಲ್ಲ ಪ್ರಮುಖರಿದ್ದಾರೆ. ರಾಮ ಮಂದಿರಕ್ಕೆ ಬರುವವರು ಆವರಣದಲ್ಲಿರುವ 7 ಮಂದಿರಕ್ಕೆ ಭೇಟಿ ನೀಡಿ ಅವರ ಜೀವನದ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ರಾಮನಿಂದ ರಾಷ್ಟ್ರ ನಿರ್ಮಾಣ ಮಾಡಬೇಕು. 2047ರಲ್ಲಿ ವಿಕಸಿತ ಭಾರತ ನಿರ್ಮಾಣ ಮಾಡಲು ರಾಮನ ಗುಣ ಮೈಗೂಡಿಸಿಕೊಳ್ಳಬೇಕು” ಎಂದು ಕರೆಯಿತ್ತರು.

ವರ್ತಮಾನದ ಬಗ್ಗೆ ಯೋಚಿಸುವವರು ಭವಿಷ್ಯದ ಪೀಳಿಗೆಗೆ ಅನ್ಯಾಯ ಮಾಡಿದಂತೆ. ನಾವು ಭವಿಷ್ಯದ ಪೀಳಿಗೆ ಬಗ್ಗೆ ಯೋಚಿಸಬೇಕು. ನಾವು ದೂರದೃಷ್ಟಿಯೊಂದಿಗೆ ಕೆಲಸ ಮಾಡಬೇಕು. ಅದಕ್ಕಾಗಿ ನಾವು ಶ್ರೀರಾಮನ ವ್ಯಕ್ತಿತ್ವದಿಂದ ಕಲಿಯಬೇಕು. ರಾಮ ಅಂದರೆ ಆದರ್ಶ, ರಾಮ ಅಂದರೆ ಪುರುಷೋತ್ತಮ. ರಾಮ ಅಂದರೆ ಧರ್ಮದ ದಾರಿಯಲ್ಲಿ ನಡೆಯುವವ, ಕ್ಷಮೆಯ ಗುಣ, ಜ್ಞಾನ ವಿವೇಕ, ಕೃತಜ್ಞತೆ, ಸೌಮ್ಯ ಸ್ವಭಾವದ ಧೃಡತೆ, ರಾಮ ಅಂದರೆ ಸತ್ಯದ ಬುನಾದಿ, ನಿಷ್ಕಲ್ಮಶ ಮನಸ್ಸು. ರಾಮ ಓರ್ವ ವ್ಯಕ್ತಿಯಲ್ಲ ಅವರೊಂದು ಮೌಲ್ಯ, ಅವರೊಂದು ದಿಕ್ಕು ಎಂದರು. ಅಯೋಧ್ಯೆ ಭಾರತದ ಸಾಂಸ್ಕೃತಿಕ ಕೇಂದ್ರ. ಅಯೋಧ್ಯೆ ವಿಕಸಿತ ಭಾರತದ ಪ್ರಭಾರಿಯಾಗಲಿದೆ. ಪ್ರಾಚೀನತೆ ಜೊತೆಗೆ ಆಧುನಿಕತೆಯ ಸಂಗಮ ಅಯೋಧ್ಯೆಯಾಗಲಿದೆ. ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ, ರೈಲ್ವೆ ಸ್ಟೇಷನ್ ಇದ್ದು, ಅಯೋಧ್ಯೆಯನ್ನು ಜಾಗತಿಕವಾಗಿ ಸಂಪರ್ಕಿಸಲಾಗುತ್ತಿದೆ. ಅಯೋಧ್ಯೆ ಯುಪಿಯ ಅಗ್ರ ನಗರಗಳಲ್ಲಿ ಒಂದಾಗಿ ಬೆಳೆಯುತ್ತಿದೆ. ಕಳೆದ 11 ವರ್ಷದಲ್ಲಿ ವಿಶ್ವದ 5ನೇ ಬಲಿಷ್ಠವಾಗಿದೆ, ಶೀಘ್ರದಲ್ಲಿ ಮೂರನೇ ಬಲಿಷ್ಠ ಆರ್ಥಿಕತೆಯಾಗಲಿದೆ” ಎಂದು ಭರವಸೆ ವ್ಯಕ್ತಪಡಿಸಿದರು.

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಮಂಗಳೂರು

ಮಂಗಳೂರು : ಶಿವಮೊಗ್ಗದಿಂದ ಕೇರಳಕ್ಕೆ ಅಕ್ರಮವಾಗಿ ಜಾನುವಾರು ಸಾಗಾಟಕ್ಕೆ ಯತ್ನ – ಮೂವರ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮಾ. 4ರಿಂದ ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ – ಹರೀಶ್ ಪೂಂಜಾ

ತಾಲೂಕು, ಮಂಗಳೂರು

ಮಂಗಳೂರು : ಲೈಟ್ ಕಂಬ ಮುರಿದು ಮೈಮೇಲೆ ಬಿದ್ದು ಮೀನು ಕಾರ್ಮಿಕ ಸಾವು

⚠️ Contents are protected on this website.