ಬಜ್ಪೆ : ಮತ್ತೆ ಯುವಕನೋರ್ವನ ಮೇಲೆ ತಲವಾರು ದಾಳಿ – ಗಂಭೀರ

ಬಜ್ಜೆ : ಎಡಪದವು ಎಂಬಲ್ಲಿ ಯುವಕನೋರ್ವನಿಗೆ 4 ಮಂದಿ ದುಷ್ಕರ್ಮಿಗಳು ತಲವಾರು ದಾಳಿ ಮಾಡಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

ಎಡಪದವು ಪೂಪಾಡಿ ಕಲ್ಲು ನಿವಾಸಿ ಅಖಿಲೇಶ್ ತಲವಾರು ದಾಳಿಗೆ ಒಳಗಾದವರು ಎಂದು ತಿಳಿದು ಬಂದಿದ್ದು, ಇವರ ಬಲಕೈಗೆ ತಲವಾರು ದಾಳಿಯ ಗಂಭೀರ ಗಾಯವಾಗಿದೆ.

ಅಖಿಲೇಶ್ ಅವರು ಎಡಪದವು ಕಡೆಯಿಂದ ಮಂಗಳೂರು ಕಡೆಗೆ ತನ್ನ ಆಕ್ಟಿವಾದಲ್ಲಿ ಹೋಗುತ್ತಿದ್ದ ಸಂದರ್ಭ ಎಡಪದವಿನಲ್ಲಿ ಎರಡು ದ್ವಿಚಕ್ರ ವಾಹನಗಳಲ್ಲಿ ಬಂದಿದ್ದ ನಾಲ್ಕು ಮಂದಿ ದುಷ್ಕರ್ಮಿಗಳ ತಂಡ ತಲವಾರಿನಿಂದ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ.

ಘಟನೆ ನಡೆದ ತಕ್ಷಣ ಸ್ಥಳದಲ್ಲಿ ಜಮಾವಣೆಗೊಂಡ ಸಾರ್ವಜನಿಕರು ಅಖಿಲೇಶ್ ಅವರನ್ನು ಮೂಡುಬಿದಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ. ಇವರು ಸ್ಥಳಿಯವಾಗಿ ಕೇಟರಿಂಗ್ ಕೆಲಸ ಮಾಡಿಕೊಂಡಿದ್ದರು ಎಂದು ತಿಳಿದು ಬಂದಿದೆ.

Advertisement
Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ರಾಜ್ಯ / ದೇಶ

ಬೆಂಗಳೂರು : ಮೋದಿ ಪೋಸ್ಟ್ ನಿರ್ಬಂಧ – ಕ್ಷಮೆಯಾಚಿಸಿದ ಟೆಕ್‌ ದೈತ್ಯ ಮೆಟಾ !

ಟಾಪ್ ಸುದ್ದಿಗಳು, ರಾಜ್ಯ / ದೇಶ

ಹೊಸದೆಹಲಿ : ಸಿಜೆಪಿ ಪ್ರತಿಭಟನೆಯಲ್ಲಿ 2,873 ಅಪರಾಧಿಗಳು – ಫೋಕ್ಸೋ, ಕೊಲೆ ಅಪರಾಧಿಗಳು ಭಾಗಿ !!

ಟಾಪ್ ಸುದ್ದಿಗಳು

ಕೋಝಿಕೋಡ್ : ಮಾದಕ ದ್ರವ್ಯ ವಿರೋಧಿ ಜಾಗೃತಿ ಅಭಿಯಾನಗಳ ಲೀಡರ್ ಗಳಿಂದಲೇ ಮಕ್ಕಳಿಗೆ ಡ್ರಗ್ಸ್ ಸಪ್ಲೈ !!

⚠️ Contents are protected on this website.