ಬೆಳ್ತಂಗಡಿ, ಜೂ.24 : ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಳಿ ಸ್ಕೂಟಿಯೊಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಜೂ.12 ರಂದು ನಡೆದಿತ್ತು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕ ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.
ಸ್ಕೂಟರ್ ಚಲಾಯಿಸುತ್ತಿದ್ದ ಇತ್ತಿಚಿಗೆ ನಿವೃತ್ತಿ ಹೊಂದಿದ ಮಾಜಿ ಸೈನಿಕ ಮೋಹನ್ ಗೌಡ ಕಾಡಂಡ ಅವರು ಪುತ್ರ ದಿಯಾನ್ ಅವರನ್ನು ಕರೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಸ್ಕೂಟೆಯಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಬೆಂಕಿ ಹತ್ತಿಕೊಂಡಿತ್ತು.
ದಿಯಾನ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ (ಇಂದು) ಜೂ.24 ರಂದು ನಿಧನ ಹೊಂದಿದ್ದಾರೆ..


