ಮೂಡುಬಿದಿರೆ : ಅಮ್ಮನೊಂದಿಗೆ ಅಂಗಡಿಗೆ ತೆರಳುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿ – ಅಮ್ಮನ ಕಣ್ಣೆದುರೇ ಬಾಲಕ ಕೊನೆಯುಸಿರು !

Advertisement

ಮೂಡುಬಿದಿರೆ, ಜ. 01 : ತಾಯಿಯೊಂದಿಗೆ ಅಂಗಡಿಗೆ ತೆರಳುತ್ತಿದ್ದ ಬಾಲಕನೋರ್ವನಿಗೆ ಕಾರು ಢಿಕ್ಕಿಯಾಗಿ, ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಾರೂರು ಹೊಸಂಗಡಿ ಬಳಿ ನಡೆದಿದೆ.

Advertisement

ಹೊಸಂಗಡಿಯ ನಝೀರ್ ಎಂಬವರ ಪುತ್ರ ಝಾಹಿರ್ (13) ಮೃತಪಟ್ಟ ಬಾಲಕ ಎಂದು ಗುರುತಿಸಲಾಗಿದೆ. ಝಾಹಿರ್ ಸ್ಥಳೀಯ ಶಾಲೆಯ ಏಳನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಇಂದು ಮಧ್ಯಾಹ್ನ ತಾಯಿಯೊಂದಿಗೆ ಅಂಗಡಿಗೆಂದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ ಎದುರಿನಿಂದ ಬಂದ ಕಾರು ಢಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಚಾಲಕನ ಅಜಾಗರೂಕತೆಯೇ ಕಾರಣ ಎನ್ನಲಾಗಿದೆ.

Advertisement

ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ