ಬಂಟ್ವಾಳ : 5ನೇ ತರಗತಿ ಬಾಲಕನ ಸಮಯಪ್ರಜ್ಞೆ – ಬಿಸಿಯೂಟ ಸಿಬ್ಬಂದಿಯ ಪ್ರಾಣ ರಕ್ಷಿಸಿದ ಬಾಲಕ !

Advertisement

ಬಂಟ್ವಾಳ, ಆ. 13 : ಶಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಅಡುಗೆ ಸಿಬ್ಬಂದಿಯ ಕಿರುಚಾಟ ಕೇಳಿ ತಕ್ಷಣವೇ ಸ್ಥಳಕ್ಕೆ ಧಾವಿಸಿ, ಅಪಾಯದ ಕ್ಷಣದಲ್ಲಿ ಸಮಯಪ್ರಜ್ಞೆ ಮೆರೆದು 5ನೇ ತರಗತಿಯ ವಿದ್ಯಾರ್ಥಿಯೊಬ್ಬನ ಚುರುಕು ನಿರ್ಧಾರದಿಂದ ಶಾಲೆಯಲ್ಲಿ ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದೆ.

Advertisement

ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮಾನ್ವಿತ್ ತನ್ನ ಸಮಯಪ್ರಜ್ಞೆಯಿಂದ ಶಾಲೆಯ ಅಕ್ಷರ ದಾಸೋಹ ಸಿಬ್ಬಂದಿಯೊಬ್ಬರ ಪ್ರಾಣವನ್ನು ರಕ್ಷಿಸಿದ್ದಾನೆ. ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ಕೆಲಸ ನಡೆಯುತ್ತಿದ್ದ ವೇಳೆ ಸಿಬ್ಬಂದಿಯೊಬ್ಬರ ಬೆರಳು ಆಕಸ್ಮಿಕವಾಗಿ ವಿದ್ಯುತ್ ಚಾಲಿತ ತುರಿಯುವ ಯಂತ್ರಕ್ಕೆ ಸಿಲುಕಿಕೊಂಡಿದೆ. ನೋವಿನಿಂದ ಸಿಬ್ಬಂದಿ ಕಿರುಚಿಕೊಂಡಿದ್ದು, ಆ ಶಬ್ದವನ್ನು ಕೇಳಿದ ಶಾಲಾ ಆವರಣದಲ್ಲಿ ಆಟವಾಡುತ್ತಿದ್ದ ಮಾನ್ವಿತ್ ತಕ್ಷಣ ಸ್ಥಳಕ್ಕೆ ಧಾವಿಸಿದ್ದಾನೆ.

Advertisement

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಾಲಕ, ಕೂಡಲೇ ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದ್ದಾನೆ. ಇದರಿಂದ ಸಿಬ್ಬಂದಿಗೆ ಮತ್ತಷ್ಟು ಅಪಾಯವಾಗುವುದನ್ನು ತಪ್ಪಿಸಲು ಸಾಧ್ಯವಾಗಿದೆ. ಮಾನ್ವಿತ್‌ನ ಸಮಯಪ್ರಜ್ಞೆ ಹಾಗೂ ಧೈರ್ಯವನ್ನು ಶಾಲೆಯ ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಅಧ್ಯಕ್ಷ ರವಿ ಅಂಚನ್ ಹಾಗೂ ಸದಸ್ಯರು ಶ್ಲಾಘಿಸಿದ್ದಾರೆ.

ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ನೋನಯ್ಯ ನಾಯಕ್ ಹಾಗೂ ಸಿಆರ್‌ಪಿ ಜ್ಯೋತಿ ಕೂಡ ಶಾಲೆಗೆ ಭೇಟಿ ನೀಡಿ ಬಾಲಕನ ಸಮಯೋಚಿತ ಕ್ರಮವನ್ನು ಪ್ರಶಂಸಿಸಿದ್ದಾರೆ. ಅಪಾಯದ ಕ್ಷಣದಲ್ಲಿ ಗಾಬರಿಗೊಳ್ಳದೆ ವಿದ್ಯುತ್ ಸಂಪರ್ಕ ಕಡಿತಗೊಳಿಸುವ ಮೂಲಕ ದೊಡ್ಡ ಅನಾಹುತ ತಪ್ಪಿಸಿದ ಪುಟ್ಟ ಮಾನ್ವಿತ್‌ನ ಸಮಯಪ್ರಜ್ಞೆ ಇದೀಗ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

Advertisement
Advertisement

Share:

ಇತ್ತೀಚಿನ ಸುದ್ದಿಗಳು

ಅಂಕಣಗಳು

ಇದನ್ನೂ ಓದಿ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಗಣೇಶೋತ್ಸವ ಹಿನ್ನೆಲೆ ಶಾಂತಿ ಸಭೆ : ನಿಯಮ ಮೀರಿದರೆ ಅನುಮತಿ ರದ್ದು – ಕಾನೂನು ಕ್ರಮದ ಎಚ್ಚರಿಕೆ

ಕರಾವಳಿ, ಟಾಪ್ ಸುದ್ದಿಗಳು

ಕಾಸರಗೋಡು : ಜಿಂಕೆ ಬೇಟೆಯಾಡಿ ಮಾಂಸ ಸಾಗಿಸುತ್ತಿದ್ದ ಆರೋಪ – ಓರ್ವನ ಬಂಧನ

ಟಾಪ್ ಸುದ್ದಿಗಳು, ತಾಲೂಕು, ಬೆಳ್ತಂಗಡಿ

ಬೆಳ್ತಂಗಡಿ : ಮನೆಯ ಬಾವಿಗೆ ಹಾರಿ ಯುವತಿ ಆತ್ಮಹತ್ಯೆ